ನ್ಯಾಯಸ್ಥಾಪಕರು 15:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗುಡ್ಡದ ಮೇಲಿನಿಂದ ಕರತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ,” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗಿರಿಯಿಂದ ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದಕ್ಕೆ ಅವರು - ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗಿರಿಯಿಂದ ತಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೂದ್ಯರು, “ಆಗಲಿ, ನಾವು ನಿನ್ನನ್ನು ಬಂಧಿಸಿ ಫಿಲಿಷ್ಟಿಯರಿಗೆ ಕೊಡುತ್ತೇವೆ. ನಾವು ನಿನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡುತ್ತೇವೆ” ಎಂದು ಹೇಳಿದರು. ಅವರು ಸಂಸೋನನನ್ನು ಎರಡು ಹೊಸ ಹಗ್ಗಗಳಿಂದ ಬಂಧಿಸಿ ಗುಹೆಯಿಂದ ಹೊರ ಕರೆತಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅದಕ್ಕವರು, “ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ, ಅವರ ಕೈಯಲ್ಲಿ ಒಪ್ಪಿಸಿಕೊಡುವೆವು. ನಾವು ನಿನ್ನನ್ನು ನಿಜವಾಗಿ ಕೊಲ್ಲುವುದೇ ಇಲ್ಲ,” ಎಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ, ಬಂಡೆಯ ಮೇಲಿನಿಂದ ತಂದರು. ಅಧ್ಯಾಯವನ್ನು ನೋಡಿ |