Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಂಸೋನನನ್ನು ಲೆಹೀ ಎಂಬ ಸ್ಥಳಕ್ಕೆ ತಂದಾಗ ಫಿಲಿಷ್ಟಿಯರು ಅವನನ್ನು ನೋಡುವದಕ್ಕೆ ಬಂದರು. ಅವರು ಸಂತೋಷದಿಂದ ಆರ್ಭಟಿಸುತ್ತಿದ್ದರು. ಆಗ ಯೆಹೋವನ ಆತ್ಮವು ಪ್ರಬಲವಾಗಿ ಸಂಸೋನನ ಮೇಲೆ ಬಂದಿತು. ಸಂಸೋನನು ಹಗ್ಗಗಳನ್ನು ಸುಟ್ಟದಾರಗಳೊ ಎಂಬಂತೆ ಕಿತ್ತುಹಾಕಿದನು; ಕೈಗೆ ಕಟ್ಟಿದ್ದ ಹಗ್ಗಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಲೇಹಿಗೆ ಬಂದಾಗ, ಫಿಲಿಷ್ಟಿಯರು ಅವನ ಎದುರಾಗಿ ಆರ್ಭಟಿಸುತ್ತಾ ಬಂದರು. ಯೆಹೋವ ದೇವರ ಆತ್ಮ ಅವನ ಮೇಲೆ ಬಲವಾಗಿ ಬಂದದ್ದರಿಂದ, ಅವನ ತೋಳುಗಳಲ್ಲಿ ಕಟ್ಟಿದ್ದ ಸೆಣಬಿನ ಹಗ್ಗಗಳು ಬೆಂಕಿಯಲ್ಲಿ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಯಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:14
22 ತಿಳಿವುಗಳ ಹೋಲಿಕೆ  

ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು.


ಅವರು ನನ್ನನ್ನು ಸುತ್ತಲೂ ಮುತ್ತಿದರು; ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು.


ನಾನು ಒಡನೇ ಬೆನ್ನಟ್ಟಿ, ಅದನ್ನು ಹೊಡೆದು, ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆನು. ಅದು ಹಿಂದಿರುಗಿ ನನ್ನ ಮೇಲೆ ಬೀಳಲು ಬಂದಾಗ ಅದರ ಗದ್ದಹಿಡಿದು ಬಡಿದು ಕೊಂದುಹಾಕುತ್ತಿದ್ದೆನು.


ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.


ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.


ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.


ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?


ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.


ಜನರು ಸಂಸೋನನನ್ನು ನೋಡಿದಾಗ, “ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಎಂದು ಹಾಡು ಹಾಡಿ ಸಂತೋಷಿಸಿದರು.


ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ, ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.


ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು” ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೇ ಆ ಎಳೆಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು.


‘ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ?. ಪ್ರತಿಯೊಬ್ಬ ಪುರುಷನಿಗೆ ಒಬ್ಬಿಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, ಕಂಠಮಾಲೆಯೂ ದೊರಕಿರುತ್ತವೆ.’


ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು.


ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, ‘ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ’ ಎಂದು ಅಂದುಕೊಳ್ಳುವನು.


ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗುಡ್ಡದ ಮೇಲಿನಿಂದ ಕರತಂದರು.


ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತ್ಯದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯಮಾಡಿಕೊಂಡರು.


ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ.


ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು