Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಸಂಹರಿಸಿಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಲ್ಲೇ ಒಂದು ಕತ್ತೆಯ ದವಡೆ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸಂಸೋನನು ಸತ್ತಕತ್ತೆಯ ದವಡೇ ಎಲುಬನ್ನು ಕಂಡನು. ಅವನು ಆ ದವಡೇ ಎಲುಬನ್ನು ತೆಗೆದುಕೊಂಡು ಅದರಿಂದ ಒಂದು ಸಾವಿರ ಫಿಲಿಷ್ಟಿಯರನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ಒಂದು ಕತ್ತೆಯ ದವಡೆಯ ಹೊಸ ಎಲುಬನ್ನು ಕಂಡುಕೊಂಡು, ತನ್ನ ಕೈಯನ್ನು ಚಾಚಿ ತೆಗೆದುಕೊಂಡು, ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:15
14 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.


ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.


ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.


ಯೋನಾತಾನನು ಅವನ ಸೇವಕನು ಮಾಡಿದ ಮೊದಲ ದಾಳಿಯಲ್ಲಿ ಸುಮಾರು ಇಪ್ಪತ್ತು ಜನರು ಅರ್ಧ ಎಕರೆ ಭೂಮಿಯಲ್ಲಿ ಸತ್ತುಹೋದರು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.


ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ, ಉರಿಯುವ ಪಂಜು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ,


ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೆಲ್ಲಗೆ ಹತ್ತಿರ ಹೋಗಿ, ಅವನ ತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.


ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.


“ಕತ್ತೆಯ ದವಡೇ ಎಲುಬಿನಿಂದ ಸಾವಿರ ಜನರನ್ನು ಸಾಯಿಸಿದೆನು; ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಎಂದು ಹೇಳಿ,


ತನ್ನ ಕೈಯಲ್ಲಿದ್ದ ಎಲುಬನ್ನು ಬೀಸಾಡಿದನು. ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು.


ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ ಮತ್ತು ಅವರನ್ನು ಕತ್ತಿಯಿಂದ ಸಂಹರಿಸುವಿರಿ.


ದಾವೀದನೊಂದಿಗಿದ್ದ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷಬ್ ಬಷ್ಬೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು