ನ್ಯಾಯಸ್ಥಾಪಕರು 16:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ದೆಲೀಲಳು ಸಂಸೋನನಿಗೆ “ನೀನು ತಿರುಗಿ ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸು” ಅನ್ನಲು ಅವನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯಿದರೆ ಸಾಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ದೆಲೀಲಳು ಸಂಸೋನನಿಗೆ, “ನೀವು ತಿರುಗಿ ನನ್ನನ್ನು ವಂಚಿಸಿದಿರಿ, ಸುಳ್ಳಾಡಿದಿರಿ; ನಿಮ್ಮನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸಿ,” ಎನ್ನಲು ಅವನು, “ನನ್ನ ತಲೆಗೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದರೆ ಸಾಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ದೆಲೀಲಳು ಸಂಸೋನನಿಗೆ - ನೀನು ತಿರಿಗಿ ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವದರಿಂದ ಕಟ್ಟಬಹುದೆಂದು ತಿಳಿಸು ಅನ್ನಲು ಅವನು - ನನ್ನ ತಲೇಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯಿದರೆ ಸಾಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ದೆಲೀಲಳು ಸಂಸೋನನಿಗೆ, “ನೀನು ನನಗೆ ಪುನಃ ಸುಳ್ಳು ಹೇಳಿದೆ. ನೀನು ನನ್ನನ್ನು ವಂಚಿಸಿದೆ. ನಿನ್ನನ್ನು ಬಂಧಿಸುವುದು ಹೇಗೆಂಬುದನ್ನು ಈಗ ನನಗೆ ತಿಳಿಸು” ಎಂದು ಕೇಳಿದಳು. ಸಂಸೋನನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದು ಕಟ್ಟಿದರೆ ನಾನು ಬೇರೆ ಮನುಷ್ಯರಂತೆ ದುರ್ಬಲನಾಗುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದೆಲೀಲಳು ಸಂಸೋನನಿಗೆ, “ಈವರೆಗೂ ನನ್ನನ್ನು ವಂಚನೆಮಾಡಿ, ನನಗೆ ಸುಳ್ಳುಗಳನ್ನು ಹೇಳಿದೆ. ನಿನ್ನನ್ನು ಯಾವುದರಿಂದ ಕಟ್ಟಬಹುದೋ ತಿಳಿಸು,” ಎಂದಳು. ಅವನು ಅವಳಿಗೆ, “ನೀನು ನನ್ನ ತಲೆಯ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದರೆ ಆಗುವುದು,” ಎಂದನು. ಅಧ್ಯಾಯವನ್ನು ನೋಡಿ |