ನ್ಯಾಯಸ್ಥಾಪಕರು 16:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವಳು ಅವನ ತಲೆಕೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚೆತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವಳು ಅವನ ತಲೆಗೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ,” ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚೆತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವಳು ಅವನ ತಲೇಕೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸಂಸೋನನು ಮಲಗಿಕೊಂಡಿರುವಾಗ ದೆಲೀಲಳು ಅವನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದಳು. ಆಮೇಲೆ ಆ ಮಗ್ಗವನ್ನು ಒಂದು ಗೂಟದಿಂದ ಭದ್ರಪಡಿಸಿದಳು. ಬಳಿಕ, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಮತ್ತೆ ಕೂಗಿಕೊಂಡಳು. ಸಂಸೋನನು ಗೂಟವನ್ನೂ ಮಗ್ಗವನ್ನೂ ಲಾಳಿಯನ್ನೂ ಕಿತ್ತುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸಂಸೋನನು ಮಲಗಿರುವಾಗ ದೆಲೀಲಳು ಅವನ ತಲೆಗೂದಲಿನ ಏಳು ಜಡೆಗಳನ್ನು ಆಗ ಅವುಗಳನ್ನು ಗೂಟದಿಂದ ಭದ್ರಮಾಡಿ, ಅವನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಎದ್ದು, ಮಗ್ಗದ ಗೂಟವನ್ನೂ ಮಗ್ಗವನ್ನೂ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿ |