Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿರಿ: ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ” ಎಂದು ಹೇಳಿ, ಕರೆಕಳುಹಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಮುಖಂಡರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿ; ಅವರು ನನಗೆ ತಮ್ಮ ಹೃದಯವನ್ನೆಲ್ಲಾ ಬಿಚ್ಚಿದ್ದಾರೆ,” ಎಂದು ಹೇಳಿ ಕರೆಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ಇದೊಂದು ಸಾರಿ ಬನ್ನಿರಿ; ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ ಎಂದು ಹೇಳಿಸಿ ಕರಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸಂಸೋನನು ತನ್ನ ರಹಸ್ಯವನ್ನು ತಿಳಿಸಿದನೆಂದು ದೆಲೀಲಳಿಗೆ ಗೊತ್ತಾಯಿತು. ಅವಳು ಫಿಲಿಷ್ಟಿಯ ಅಧಿಪತಿಗಳಿಗೆ ಸಂದೇಶವನ್ನು ಕಳುಹಿಸಿದಳು. ಅವಳು, “ಸಂಸೋನನು ನನಗೆ ಎಲ್ಲವನ್ನು ಹೇಳಿದ್ದಾನೆ, ಮತ್ತೊಮ್ಮೆ ಬನ್ನಿ” ಎಂದು ಹೇಳಿದಳು. ಫಿಲಿಷ್ಟಿಯ ಅಧಿಪತಿಗಳು ದೆಲೀಲಳ ಬಳಿಗೆ ಬಂದರು. ಅವರು ಅವಳಿಗೆ ಕೊಡುವುದಾಗಿ ಹೇಳಿದ್ದ ಹಣವನ್ನು ತಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ದೆಲೀಲಳು, ಅವನು ತನಗೆ ತನ್ನ ಹೃದಯಲ್ಲಿರುವುದನ್ನೆಲ್ಲಾ ತಿಳಿಸಿದ್ದಾನೆಂದು ಕಂಡು, ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ, “ನೀವು ಈ ಸಾರಿ ಬನ್ನಿರಿ. ಏಕೆಂದರೆ ಅವನು ತನ್ನ ಹೃದಯದಲ್ಲಿರುವುದನ್ನೆಲ್ಲಾ ನನಗೆ ತಿಳಿಸಿದನು,” ಎಂದು ಕರೆಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಅವಳ ಬಳಿಗೆ ಹಣವನ್ನು ತಮ್ಮ ಕೈಯಲ್ಲಿ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:18
11 ತಿಳಿವುಗಳ ಹೋಲಿಕೆ  

ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.


ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು.


ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.


ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.


ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.


ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.


ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು