Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸಂಸೋನನು ಬಂದಿರುವುದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸಂಸೋನನು ಬಂದಿರುವುದು ಗಾಜಾದವರಿಗೆ ಗೊತ್ತಾಯಿತು? ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೇ ಅವನನ್ನು ಕೊಂದು ಹಾಕಬೇಕೆಂದುಕೊಂಡು ರಾತ್ರಿಯೆಲ್ಲಾ ಊರಬಾಗಿಲಲ್ಲೇ ಹೊಂಚುಹಾಕುತ್ತಾ ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸಂಸೋನನು ಬಂದಿರುವದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು; ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಾರೋ ಒಬ್ಬರು, “ಸಂಸೋನನು ಇಲ್ಲಿಗೆ ಬಂದಿದ್ದಾನೆ” ಎಂದು ಗಾಜಾದ ಜನರಿಗೆ ಹೇಳಿದರು. ಅವರು ಅವನನ್ನು ಕೊಲ್ಲಬೇಕೆಂದಿದ್ದರು. ಅದಕ್ಕಾಗಿ ಅವರು ಆ ಸ್ಥಳವನ್ನು ಸುತ್ತುಗಟ್ಟಿದರು. ನಗರದ ಬಾಗಿಲುಗಳನ್ನು ಭದ್ರಪಡಿಸಿ ಅಡಗಿಕೊಂಡು ಸಂಸೋನನ ದಾರಿಕಾಯ್ದರು. ಇಡೀರಾತ್ರಿ ಅವರು ನಗರದ ಬಾಗಿಲಲ್ಲಿ ಸುಮ್ಮನಿದ್ದರು. “ಬೆಳಗಾದ ಮೇಲೆ ನಾವು ಸಂಸೋನನನ್ನು ಕೊಲ್ಲೋಣ” ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ತಿಳಿದಿದ್ದರಿಂದ, ಅವರು ಅವನನ್ನು ಸುತ್ತಿಕೊಂಡು, ಪಟ್ಟಣದ ಬಾಗಿಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು, ರಾತ್ರಿಯೆಲ್ಲಾ ಕಾದುಕೊಂಡಿದ್ದರು. ಅವರು, “ಹೊತ್ತಾರೆ ಬೆಳಕಾದಾಗ ಅವನನ್ನು ಕೊಂದು ಹಾಕುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:2
11 ತಿಳಿವುಗಳ ಹೋಲಿಕೆ  

ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ, ಅವನ ಜನರೂ ಬಂದು ಅವರನ್ನು ಮುತ್ತಿಗೆ ಹಾಕುವುದಕ್ಕಿದ್ದರು.


ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.


ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ” ಅಂದರು.


ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,


ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು


ಸೌಲನು ಕೂಡಲೇ ದೂತರನ್ನು ಕರಿಸಿ ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ” ಎಂದು ಹೇಳಿ


ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು


“ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ.


ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರು ಬಾಗಿಲಿನ ಕದಗಳನ್ನೂ, ಅದರ ಎರಡು ನಿಲುವುಪಟ್ಟಿಗಳನ್ನೂ, ಅಗುಳಿಗಳನ್ನೂ ಕಿತ್ತು, ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತ ಶಿಖರದ ಮೇಲೆ ಇಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು