Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಫಿಲಿಷ್ಟಿಯರು ಅವನನ್ನು ಹಿಡಿದು ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಕಬ್ಬಿಣದ ಬೇಡಿಗಳನ್ನು ಹಾಕಿ ಸೆರೆಮನೆಯಲ್ಲಿ ಬೀಸುವದಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಫಿಲಿಷ್ಟಿಯರು ಸಂಸೋನನನ್ನು ಬಂಧಿಸಿ ಅವನ ಕಣ್ಣುಗಳನ್ನು ಕಿತ್ತು ಗಾಜಾ ನಗರಕ್ಕೆ ತೆಗೆದುಕೊಂಡು ಹೋದರು. ಅವನು ಓಡಿಹೋಗದಂತೆ ಅವನಿಗೆ ಸಂಕೋಲೆಗಳನ್ನು ಬಿಗಿದರು. ಅವರು ಸಂಸೋನನನ್ನು ಒಂದು ಸೆರೆಮನೆಯಲ್ಲಿಟ್ಟು ಧಾನ್ಯಬೀಸುವ ಕೆಲಸಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಫಿಲಿಷ್ಟಿಯರು ಅವನನ್ನು ಹಿಡಿದು, ಅವನ ಕಣ್ಣುಗಳನ್ನು ಕಿತ್ತು, ಅವನನ್ನು ಗಾಜಕ್ಕೆ ಒಯ್ದು ಎರಡು ಕಂಚಿನ ಸಂಕೋಲೆಗಳನ್ನು ಹಾಕಿದರು. ಸೆರೆಮನೆಯಲ್ಲಿ ಅವನನ್ನು ಬೀಸುವುದಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:21
15 ತಿಳಿವುಗಳ ಹೋಲಿಕೆ  

ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ, ಅವರಿಗೆ ಜೀವದ ಮಾರ್ಗವು ದೊರೆಯುವುದೇ ಇಲ್ಲ.


ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು.


ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ, ಈಜಾಡುವ ಬಟ್ಟೆಯ ನೆರಿಗೆಯನ್ನು ಹರಿದುಬಿಟ್ಟು, ಬೆತ್ತಲಾಗಿ ನದಿಗಳನ್ನು ಹಾದುಹೋಗು.


ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.


ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.


ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.


ಆಗ ಅವಳು, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನು ಎಚ್ಚೆತ್ತು, ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.


ಅಷ್ಟರಲ್ಲಿ ಅವನ ತಲೆಯ ಕೂದಲುಗಳು ಬೆಳೆಯ ತೊಡಗಿದವು.


ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬಿಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.


ಯುವಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು; ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು