Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರು ಆನಂದಲಹರಿಯಲ್ಲಿದ್ದಾಗ, “ನಮ್ಮ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿ,” ಎಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ಅವರೆಲ್ಲರ ಮನರಂಜಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ಆನಂದಲಹರಿಯಲ್ಲಿದ್ದಾಗ - ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು; ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದಮಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಉತ್ಸವದಲ್ಲಿ ಜನರು ಸಂತೋಷವಾಗಿದ್ದರು. ಅವರು, “ಸಂಸೋನನನ್ನು ಕರೆದು ತನ್ನಿ. ನಾವು ಅವನ ತಮಾಷೆಯನ್ನು ನೋಡಬೇಕು” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ತಂದು ಅವನನ್ನು ಅಪಹಾಸ್ಯ ಮಾಡಿದರು. ಸಂಸೋನನನ್ನು ಅವರ ದೇವರಾದ ದಾಗೋನನ ಮಂದಿರದಲ್ಲಿ ಎರಡು ಕಂಬಗಳ ಮಧ್ಯದಲ್ಲಿ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅಲ್ಲಿ ಅವರು ಸಂಭ್ರಮವಾಗಿರುವಾಗ, “ನಮ್ಮ ಮುಂದೆ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿರಿ,” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರೆತಂದಾಗ, ಅವನು ಅವರ ಮುಂದೆ ವಿನೋದ ಮಾಡಬೇಕಾಯಿತು. ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:25
23 ತಿಳಿವುಗಳ ಹೋಲಿಕೆ  

ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.


ಅವರಿಬ್ಬರೂ ಕುಳಿತುಕೊಂಡು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ಪುನಃ ಅವನಿಗೆ, “ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು” ಎಂದು ಹೇಳಿದರೂ ಆ ಲೇವಿಯನು ಹೊರಡುವುದಕ್ಕಿದ್ದನು;


ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.


ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ


ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.


ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.


ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.


ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.


ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.


ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು” ಎಂದು ಬೇಡಿಕೊಂಡನು.


ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ, ಕೆತ್ತನೆಯ ವಿಗ್ರಹವನ್ನೂ, ತೆಗೆದುಕೊಂಡು ಅವರ ಬಳಿಗೆ ಬಂದನು.


ಜನರು ಸಂಸೋನನನ್ನು ನೋಡಿದಾಗ, “ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಎಂದು ಹಾಡು ಹಾಡಿ ಸಂತೋಷಿಸಿದರು.


ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುವ ಹುಡುಗನಿಗೆ, “ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ” ಅಂದನು.


ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು