ನ್ಯಾಯಸ್ಥಾಪಕರು 16:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆಗ ಅ ಕಟ್ಟಡವು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ನಾನು ಫಿಲಿಷ್ಟಿಯರ ಸಂಗಡ ಸಾಯುವೆನು,” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆ ಮನೆಯು ಅಧಿಪತಿಗಳ ಮೇಲೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದು ಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವುಗಳನ್ನು ಒತ್ತಿ ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು ಎಂದು ಹೇಳಿ ಬಲವಾಗಿ ಬಾಗಿಕೊಳ್ಳಲು ಮನೆಯು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ಈ ಫಿಲಿಷ್ಟಿಯರ ಜೊತೆ ನಾನೂ ಸಾಯಲು ಸಿದ್ಧ” ಎಂದು ಹೇಳಿ ಆ ಎರಡೂ ಕಂಬಗಳನ್ನು ತನ್ನ ಎಲ್ಲಾ ಶಕ್ತಿಯಿಂದ ಎಳೆಯುತ್ತಾ ಬಾಗಿದನು. ಆಗ ಮಂದಿರವು ಅಧಿಪತಿಗಳ ಮೇಲೂ ಅಲ್ಲಿದ್ದ ಜನರೆಲ್ಲರ ಮೇಲೂ ಕುಸಿದು ಬಿತ್ತು. ಈ ಪ್ರಕಾರ ಸಂಸೋನನು ತಾನು ಜೀವದಿಂದಿದ್ದಾಗ ಕೊಂದ ಜನರಿಗಿಂತ ಹೆಚ್ಚು ಜನರನ್ನು ತಾನು ಸಾಯುವಾಗ ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ,” ಎಂದು ಹೇಳಿ ತನ್ನ ಶಕ್ತಿಯಿದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ, ಅದರಲ್ಲಿದ್ದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಸಂಸೋನನು ಬದುಕಿದ್ದಾಗ ಕೊಂದ ಜನರಿಗಿಂತಲೂ ಮರಣಹೊಂದುವಾಗ ಕೊಂದ ಜನರ ಸಂಖ್ಯೆಯೇ ಹೆಚ್ಚಾಗಿತ್ತು. ಅಧ್ಯಾಯವನ್ನು ನೋಡಿ |