Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನ ಬಂಧುಗಳೂ, ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆಯಾದ ಮಾನೋಹನ ಸಮಾಧಿಯಲ್ಲಿ ಹೂಣಿಟ್ಟರು. ಅವನು ಇಸ್ರಾಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವನ ಬಂಧುಗಳೂ ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ಎತ್ತಿಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆ ಮಾನೋಹನ ಸಮಾಧಿಯಲ್ಲಿ ಸ್ಥಾಪನೆಮಾಡಿದರು. ಅವನು ಇಸ್ರಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವನ ಬಂಧುಗಳೂ ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ಎತ್ತಿ ತೆಗೆದುಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆಯಾದ ಮಾನೋಹನ ಸಮಾಧಿಯಲ್ಲಿ ಹೂಣಿಟ್ಟರು. ಅವನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷ ಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಸಂಸೋನನ ಸಹೋದರರು ಮತ್ತು ಅವನ ತಂದೆಯ ಕುಟುಂಬದವರೆಲ್ಲರು ಬಂದು ಅವನ ದೇಹವನ್ನು ತೆಗೆದುಕೊಂಡು ಹೋಗಿ ಅವನ ತಂದೆಯ ಸಮಾಧಿಯಲ್ಲಿ ಹೂಳಿಟ್ಟರು. ಅವನ ತಂದೆಯ ಹೆಸರು ಮಾನೋಹ. ಆ ಸಮಾಧಿಯು ಚೊರ್ಗಕ್ಕೂ ಮತ್ತು ಎಷ್ಟಾವೋಲಿಗೂ ಮಧ್ಯದಲ್ಲಿದೆ. ಸಂಸೋನನು ಇಪ್ಪತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತೆಗೆದುಕೊಂಡು ಬಂದು, ಚೊರ್ಗಕ್ಕೂ, ಎಷ್ಟಾವೋಲಿಗೂ ನಡುವೆ ಅವನ ತಂದೆ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರ್ಷ ನ್ಯಾಯತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:31
8 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರ ಪ್ರಾಬಲ್ಯದಲ್ಲಿ ಸಂಸೋನನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ವರೆಗೆ ಪಾಲಿಸಿದನು.


ಇದಲ್ಲದೆ ಅವನು ಚೊರ್ಗಕ್ಕೂ, ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು.


ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದರಿಂದ ಅವನಿಗೆ ಮಕ್ಕಳಿರಲಿಲ್ಲ.


ಚೊರ್ಗಾ, ಎಷ್ಟಾವೋಲ್, ಈರ್ಷೆಮೆಷ್,


ಇಳಿಜಾರು ಪ್ರದೇಶದಲ್ಲಿ ಎಷ್ಟಾವೋಲ್, ಚೊರ್ಗಾ, ಅಶ್ನಾ


“ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆಗ ಅ ಕಟ್ಟಡವು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಾಗಿತ್ತು.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕನೆಂಬ ಒಬ್ಬ ಮನುಷ್ಯನಿದ್ದನು. ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು