Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು, “ಹಸಿ ನಾರಿನ ಏಳು ಎಳೆಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವನು, “ಕರುಳಿನ ಏಳು ಹಸಿ ತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು - ಕರುಳಿನ ಏಳು ಹಸೀ ತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದಕ್ಕೆ ಸಂಸೋನನು, “ಬಿಲ್ಲಿನ ಏಳು ಹೊಸತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬೇರೆ ಮನುಷ್ಯರಂತೆ ಬಲಹೀನನಾಗುತ್ತೇನೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಂಸೋನನು ಅವಳಿಗೆ, “ಅವರು ನನ್ನನ್ನು ಒಣಗದೆ ಇರುವ ಹಸುರಾದ ಏಳು ನಾರಿನ ಬರಲುಗಳಿಂದ ಕಟ್ಟಿದರೆ, ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:7
12 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.


ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.


“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.


ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ, ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ.


ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ.


ಆಕೀಷನು ಅವನನ್ನು “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ” ಎಂದು ಕೇಳುವನು. ದಾವೀದನು ಅವನಿಗೆ “ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ” ಹೇಳುವರು.


ಆಗ ಸೌಲನು ಮೀಕಲಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ” ಎನ್ನಲು ಆಕೆಯು ಅವನಿಗೆ, “ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ ಎಂದು ಅವನು ನನಗೆ ಹೇಳಿದನು” ಅಂದಳು.


ದೆಲೀಲಳು ತಿರುಗಿ ಸಂಸೋನನಿಗೆ, “ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸು” ಎಂದಳು.


ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾ ಶಕ್ತಿ ಹೇಗೆ ಬಂದಿತು? ನಿನ್ನನ್ನು ಬಲವನ್ನು ಕುಂದಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸು” ಅಂದಳು.


ಫಿಲಿಷ್ಟಿಯ ಪ್ರಭುಗಳು ಅಂಥ ಹಸೀ ನಾರಿನ ಏಳು ಎಳೆಗಳನ್ನು ಅವಳಿಗೆ ತಂದುಕೊಟ್ಟರು.


ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು” ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೇ ಆ ಎಳೆಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು