ನ್ಯಾಯಸ್ಥಾಪಕರು 16:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು” ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೇ ಆ ಎಳೆಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿಸಿ, “ಸಂಸೋನರೇ, ನಿಮ್ಮ ಮೇಲೆ ಫಿಲಿಷ್ಟಿಯರು ಬಂದರು,” ಎಂದು ಕೂಗಿದಳು. ಅವನು ಬೆಂಕಿ ತಗಲಿದ ಸೆಣಬಿನ ದಾರವನ್ನೋ ಎಂಬಂತೆ ಆ ತಂತಿಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿಯ ರಹಸ್ಯ ತಿಳಿಯದೆಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ - ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೆ ಆ ತಂತಿಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಪಕ್ಕದ ಕೋಣೆಯಲ್ಲಿ ಕೆಲವು ಜನ ಅಡಗಿಕೊಂಡಿದ್ದರು. ಆಗ ದೆಲೀಲಳು ಸಂಸೋನನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಹೇಳಿದಳು. ಆದರೆ ಸಂಸೋನನು ಸುಲಭವಾಗಿ ಆ ಬಿಲ್ಲಿನ ತಂತಿಗಳನ್ನು ಕಿತ್ತುಹಾಕಿದನು; ಸುಟ್ಟದಾರದಿಂದ ಬೂದಿ ಉದುರಿ ಬೀಳುವಂತೆ ಆ ತಂತಿಗಳು ಕಿತ್ತುಬಿದ್ದವು. ಹೀಗಾಗಿ ಫಿಲಿಷ್ಟಿಯರಿಗೆ ಸಂಸೋನನ ಬಲದ ರಹಸ್ಯ ತಿಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೊಂಚುಗಾರರು ಅವಳಿಗೋಸ್ಕರ ಕೊಠಡಿಯಲ್ಲಿದ್ದರು. ಅವಳು ಅವನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ,” ಎಂದಳು. ಆಗ ಅವನು ಬೆಂಕಿ ತಗುಲಿದ ಸೆಣಬಿನ ದಾರ ಹರಿದು ಹೋಗುವ ಹಾಗೆಯೇ ನಾರಿನ ಬರಲುಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿಯ ರಹಸ್ಯ ತಿಳಿಯದೆ ಹೋಯಿತು. ಅಧ್ಯಾಯವನ್ನು ನೋಡಿ |