Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆದುಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಕಾಲದಲ್ಲಿ ಇಸ್ರಯೇಲರಲ್ಲಿ ಅರಸನಿರಲಿಲ್ಲ. ಪ್ರತಿಯೊಬ್ಬನು ಮನಸ್ಸಿಗೆ ಬಂದಹಾಗೆ ನಡೆಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 (ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬರೂ ತಮಗೆ ಸರಿ ತೋರಿದಂತೆ ನಡೆದುಕೊಳ್ಳುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ದಿವಸಗಳಲ್ಲಿ ಇಸ್ರಾಯೇಲಿನಲ್ಲಿ ಅರಸನು ಇರಲಿಲ್ಲ. ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:6
13 ತಿಳಿವುಗಳ ಹೋಲಿಕೆ  

ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.


ಈಗ ಈ ಸ್ಥಳದಲ್ಲಿ ನಾವು ನಡೆಕೊಳ್ಳುವಂತೆ ಎಲ್ಲರೂ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ನಡೆಯಬಾರದು.


ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ, ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.


ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.


ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ದಾನ್ ಕುಲದವರಿಗೆ ಆ ವರೆಗೂ ಇಸ್ರಾಯೇಲರಲ್ಲಿ ಸ್ವತ್ತು ದೊರಕಿರಲಿಲ್ಲ, ಅವರು ತಮಗೋಸ್ಕರ ವಾಸಸ್ಥಳವನ್ನು ಹುಡುಕುತ್ತಿದ್ದರು.


ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧವಾಗಿದೆ, ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು.


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.


“ಯೆಹೋವನೇ, ಇಸ್ರಾಯೇಲ್ಯರ ದೇವರೇ, ನಮ್ಮಲ್ಲಿ ಹೀಗೆ ಯಾಕೆ ಆಯಿತು? ಇಸ್ರಾಯೇಲರ ಒಂದು ಕುಲವು ಹಾಳಾಗಿ ಹೋಯಿತಲ್ಲಾ” ಎಂದು ಕೂಗಿದರು.


ಇಸ್ರಾಯೇಲರ ಕುಲಗಳು ಅವರ ಅಧಿಪತಿಗಳೊಡನೆ ಒಟ್ಟಾಗಿ ಸೇರಿಬಂದಾಗ ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.


ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು