Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಗುಡ್ಡಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ದಾನ್ಯರ ಪಾಳೆಯ’ ಎಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀವಿುನ ಬಳಿಯಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀವಿುನ ಪಶ್ಚಿಮದಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಲಯಿಷ್ ನಗರಕ್ಕೆ ಹೋಗುವ ಮಾರ್ಗದಲ್ಲಿ ಅವರು ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ನಿಂತುಕೊಂಡರು. ಅವರು ಅಲ್ಲಿ ಒಂದು ಪಾಳೆಯ ಮಾಡಿಕೊಂಡರು. ಆದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ “ದಾನ್ಯರ ಪಾಳೆಯ”ವೆಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೂದದಲ್ಲಿರುವ ಕಿರ್ಯತ್ ಯಾರೀಮಿನಲ್ಲಿ ಇಳಿದುಕೊಂಡರು. ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:12
10 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಚೊರ್ಗಕ್ಕೂ, ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು.


ಕಿರ್ಯಾತ್ಯಾರೀಮ್ ಅನಿಸಿಕೊಳ್ಳುವ ಕಿರ್ಯಾತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳು ಗ್ರಾಮಗಳು.


ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತಾನು ಅದನ್ನಿರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು.


ಆಗ ಕಿರ್ಯತ್ಯಾರೀಮಿನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ, ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು, ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು.


ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.


ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.


ಆಗ ಚೊರ್ಗಾ ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧ ಸನ್ನದ್ಧರಾಗಿ ಹೊರಟು,


ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು.


ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು