Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ” ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ,” ಎಂದು ಹೇಳಿ ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದರು. ಅವನ ಯೋಗಕ್ಷೇಮವನ್ನು ವಿಚಾರಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ವಿಷಯದಲ್ಲಿ ಏನು ಮಾಡಬೇಕೆಂಬದನ್ನು ಆಲೋಚಿಸಿರಿ ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸಹತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರು ಯೌವನಸ್ಥನಾದ ಲೇವಿಯು ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು. ತರುಣನ ಯೋಗಕ್ಷೇಮವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಅಲ್ಲಿಗೆ ಹೋಗಿ ಮೀಕನ ಮನೆಯಲ್ಲಿರುವ ಯುವಕನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:15
10 ತಿಳಿವುಗಳ ಹೋಲಿಕೆ  

ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, “ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದು ಕೇಳಿದನು.


“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ನೀನು, ದಯವಿಟ್ಟು ಓಡಿಹೋಗಿ ಆಕೆಯನ್ನು ಎದುರುಗೊಂಡು, “ನಿನಗೂ, ನಿನ್ನ ಗಂಡನಿಗೂ, ಮಗನಿಗೂ ಕ್ಷೇಮವೋ?” ಎಂದು ವಿಚಾರಿಸು ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ, “ಕ್ಷೇಮ” ಎಂದು ಉತ್ತರ ಕೊಟ್ಟು,


ದಾವೀದನು ತಾನು ತಂದವುಗಳನ್ನು ಸಾಮಾನು ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ ಅವರೊಡನೆ ಮಾತನಾಡುತ್ತಿದ್ದನು.


ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.


ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ಏಫೋದೂ, ದೇವತಾಪ್ರತಿಮೆಗಳೂ, ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬುದು ನಿಮಗೆ ಗೊತ್ತುಂಟೋ?


ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು.


ಇದಲ್ಲದೆ ಇಲ್ಲಿ ಹತ್ತು ಗಿಣ್ಣದ ಉಂಡೆಗಳಿವೆ, ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು