ನ್ಯಾಯಸ್ಥಾಪಕರು 18:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ಅವನಿಗೆ, “ಸುಮ್ಮನಿರು; ಬಾಯಿ ಮುಚ್ಚಿಕೊಂಡು; ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ, ಯಾಜಕನೂ ಆಗಿರು. ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಾಯೇಲ್ಯರ ಒಂದು ಕುಲಕ್ಕೂ, ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವರು ಅವನಿಗೆ, “ಬಾಯಿಮುಚ್ಚಿ ಸುಮ್ಮನಿರಿ, ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ ಯಾಜಕನೂ ಆಗಿರು. ಒಂದೇ ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಯೇಲರ ಒಂದು ಕುಲಕ್ಕೂ ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ಅವನಿಗೆ - ಸುಮ್ಮನಿರು; ಬಾಯಿ ಮುಚ್ಚು; ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ ಯಾಜಕನೂ ಆಗಿರು. ಒಂದು ಮನೆಗೆ ಯಾಜಕನಾಗಿರುವದು ಉತ್ತಮವೋ ಅಥವಾ ಇಸ್ರಾಯೇಲ್ಯರ ಒಂದು ಕುಲಕ್ಕೂ ಗೋತ್ರಕ್ಕೂ ಯಾಜಕನಾಗಿರುವದು ಉತ್ತಮವೋ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ಐದು ಜನರು, “ಸುಮ್ಮನಿರು, ಶಬ್ದ ಮಾಡಬೇಡ. ನಮ್ಮ ಸಂಗಡ ಬಾ. ನಮಗೆ ತಂದೆಯೂ ಯಾಜಕನೂ ಆಗಿರು. ನೀನು ಕೇವಲ ಒಬ್ಬ ಮನುಷ್ಯನ ಯಾಜಕನಾಗಿರುವುದು ಒಳ್ಳೆಯದೋ ಅಥವಾ ಇಸ್ರೇಲರ ಒಂದು ಕುಲದ ಯಾಜಕನಾಗಿರುವುದು ಒಳ್ಳೆಯದೋ ಎಂಬುದನ್ನು ನೀನೇ ವಿಚಾರಮಾಡು” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ಅವನಿಗೆ, “ನೀನು ಸುಮ್ಮನೆ ಇರು; ನಿನ್ನ ಬಾಯಿ ಮುಚ್ಚಿಕೊಂಡು ನಮ್ಮ ಸಂಗಡ ಬಂದು, ನಮಗೆ ತಂದೆಯಾಗಿಯೂ, ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವುದು ಒಳ್ಳೆಯದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ, ಒಂದು ಕುಟುಂಬಕ್ಕೂ ಯಾಜಕನಾಗಿರುವುದು ಒಳ್ಳೆಯದೋ?” ಎಂದರು. ಅಧ್ಯಾಯವನ್ನು ನೋಡಿ |