ನ್ಯಾಯಸ್ಥಾಪಕರು 18:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದುಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ (ಲಯಿಷ್) ದೇಶವನ್ನು ಸಂಚರಿಸಿ ನೋಡಿ ಬನ್ನಿ,” ಎಂದು ಆಜ್ಞಾಪಿಸಿ ಕಳುಹಿಸಿದನರು . ಇವರು ಪ್ರಯಾಣ ಮಾಡುತ್ತಾ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮತ್ತು ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮ ಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ - ನೀವು ಹೋಗಿ [ಲಯಿಷ್] ದೇಶವನ್ನು ಸಂಚರಿಸಿ ನೋಡಿರಿ ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದಾನ್ ಕುಲದವರು ತಮಗೆ ಭೂಮಿಯನ್ನು ಹುಡುಕುವುದಕ್ಕಾಗಿ ಐದು ಮಂದಿ ಸೈನಿಕರನ್ನು ಕಳುಹಿಸಿದರು. ಅವರು ತಮ್ಮ ವಾಸಕ್ಕಾಗಿ ಒಳ್ಳೆಯ ಸ್ಥಳವನ್ನು ಹುಡುಕಲು ಹೋದರು. ಆ ಐದು ಮಂದಿ ಚೊರ್ಗಾ ಮತ್ತು ಎಷ್ಟಾವೋಲ್ ನಗರದವರಾಗಿದ್ದರು. ಅವರು ದಾನ್ ಕುಲದವರ ಮನೆತನಕ್ಕೆ ಸೇರಿದವರಾದ ಕಾರಣ “ಭೂಮಿಯನ್ನು ಹುಡುಕಲು” ಅವರನ್ನು ಕಳುಹಿಸಲಾಗಿತ್ತು. ಆ ಐದು ಜನರು ಎಫ್ರಾಯೀಮ್ ಬೆಟ್ಟದ ಸೀಮೆಗೆ ಬಂದು ಮೀಕನ ಮನೆಯಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದಾನರು ದೇಶವನ್ನು ಸಂಚರಿಸಿ ನೋಡಿ, ಪರಿಶೋಧಿಸುವುದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ, ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿಯನ್ನು ಕರೆದು, ಅವರ ಸಂಗಡ, “ನೀವು ಹೋಗಿ ದೇಶವನ್ನು ಸಂಚರಿಸಿ ನೋಡಿರಿ,” ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯೀಮ್ ಬೆಟ್ಟದಲ್ಲಿರುವ ಮೀಕನ ಮನೆಯ ಬಳಿಗೆ ಬಂದು ಅಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿ |