Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ತನಗಿಂತ ಬಲಿಷ್ಠರೆಂದು ತಿಳಿದುಕೊಂಡು ಮೀಕನು ಹಿಂದಿರುಗಿ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವರು ತನಗಿಂಥ ಬಲಿಷ್ಠರೆಂದು ಮೀಕನು ತಿಳಿದು ಹಿಂದಿರುಗಿ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವರು ತನಗಿಂತ ಬಲಿಷ್ಠರೆಂದು ಮೀಕನು ತಿಳಿದು ಹಿಂದಿರುಗಿ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಮೇಲೆ ದಾನ್ಯರು ಮತ್ತೆ ತಮ್ಮ ಪ್ರಯಾಣವನ್ನು ಮುಂದುವರಿಸಿದರು. ಅವರು ತುಂಬ ಬಲಿಷ್ಠರೆಂದೂ ತನ್ನಿಂದ ಏನೂ ಮಾಡಲು ಸಾಧ್ಯವಿಲ್ಲವೆಂದೂ ಮೀಕನು ತಿಳಿದುಕೊಂಡು ಮನೆಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದಾನನ ಮಕ್ಕಳು ತಮ್ಮ ಮಾರ್ಗವಾಗಿ ಹೋದರು. ಆಗ ಮೀಕನು, ಅವರು ತನಗಿಂತ ಬಲಿಷ್ಠರೆಂದು ಕಂಡು, ತಿರುಗಿಕೊಂಡು ತನ್ನ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:26
5 ತಿಳಿವುಗಳ ಹೋಲಿಕೆ  

ದಾನನು ಇಸ್ರಾಯೇಲರ ಕುಲಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.


ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ತುಂಬಾ ಕೋಪಿಸಿಕೊಳ್ಳುವವರಿದ್ದಾರೆ; ಅವರು ನಿಮ್ಮ ಮೇಲೆ ಬಿದ್ದರೆ ನೀನೂ, ನಿನ್ನ ಮನೆಯವರೂ ಪ್ರಾಣವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಬಾಯಿಮುಚ್ಚಿಕೊಂಡು ಹೋಗು” ಎಂದು ಹೇಳಿ ಮುಂದೆ ನಡೆದರು.


ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ, ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು, ಅವರನ್ನು ಕತ್ತಿಯಿಂದ ಸಂಹರಿಸಿ, ಅವರ ಪಟ್ಟಣವನ್ನು ಸುಟ್ಟುಬಿಟ್ಟರು.


ನಂತರ ಅವನು ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ, ಇನ್ನೊಂದನ್ನು ದಾನಿಗೆ ಕಳುಹಿಸಿದನು.


ಹಂಚುವಿಕೆಯನ್ನು ಅನುಸರಿಸಿ ಕುಲಗಳ ಹೆಸರುಗಳು ಇವೇ. ದೇಶದ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನ್ ಕುಲಕ್ಕೆ ಒಂದು ಭಾಗವಿದೆ. ಅದರ ಉತ್ತರ ಮೇರೆಯು ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು, ಹಮಾತಿನ ದಾರಿಯನ್ನು ದಾಟಿ, ದಮಸ್ಕದ ಮೇರೆಯಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು. ಅದರ ಕಡೆಗಳು ದೇಶದ ಪೂರ್ವ, ಪಶ್ಚಿಮಗಳ ಮೇರೆಗಳ ತನಕ ಚಾಚಿಕೊಂಡಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು