Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ, ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು, ಅವರನ್ನು ಕತ್ತಿಯಿಂದ ಸಂಹರಿಸಿ, ಅವರ ಪಟ್ಟಣವನ್ನು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು, ಲಯಿಷಿಗೆ ಹೋಗಿ, ಅಲ್ಲಿ ಸುಖದಿಂದಲೂ ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು ಅವರನ್ನು ಕತ್ತಿಯಿಂದ ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು ಅವರನ್ನು ಕತ್ತಿಯಿಂದ ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮೀಕನು ಮಾಡಿಸಿದ ವಿಗ್ರಹಗಳನ್ನು ದಾನ್ಯರು ತೆಗೆದುಕೊಂಡರು. ಅವರು ಮೀಕನ ಜೊತೆಗಿದ್ದ ಯಾಜಕನನ್ನು ಸಹ ತೆಗೆದುಕೊಂಡು ಹೋದರು. ಅವರು ಲಯಿಷಿಗೆ ಬಂದು ಅಲ್ಲಿನ ಜನರ ಮೇಲೆ ಧಾಳಿಮಾಡಿದರು. ಆ ಜನರು ಶಾಂತಿಯಿಂದ ಇದ್ದರು. ಅವರು ಧಾಳಿಯನ್ನು ನಿರೀಕ್ಷಿಸಿರಲಿಲ್ಲ. ದಾನ್ಯರು ತಮ್ಮ ಖಡ್ಗಗಳಿಂದ ಆ ಜನರನ್ನು ಕೊಂದುಹಾಕಿದರು. ಆಮೇಲೆ ಆ ನಗರವನ್ನು ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರು ಮೀಕನು ಮಾಡಿಕೊಂಡವುಗಳನ್ನೂ, ಅವನಿಗಿದ್ದ ಯಾಜಕನನ್ನೂ ತೆಗೆದುಕೊಂಡು ವಿಶ್ರಾಂತಿಯಿಂದಲೂ, ಭರವಸದಿಂದಲೂ ಇದ್ದ ಲಯಿಷಿನ ಜನರ ಮೇಲೆ ಬಂದು, ಅವರನ್ನು ಖಡ್ಗದಿಂದ ಹೊಡೆದು, ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:27
8 ತಿಳಿವುಗಳ ಹೋಲಿಕೆ  

ಆ ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು


ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿ ಆ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸಿಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರಿಟ್ಟರು.


ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ, ಅವರ ದೇಶವು ಬಹು ವಿಸ್ತಾರವಾಗಿದೆ ಎಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲಿ ಸಿಕ್ಕುವುದಿಲ್ಲ” ಅಂದರು.


ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಜೀವಿಯಾದರೂ ಉಳಿಯಲಿಲ್ಲ.


ದಾನ್ ಕುಲದ ವಿಷಯದಲ್ಲಿ, “ದಾನ್ ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ” ಎಂದು ಹೇಳಿದನು.


ದಾನನು ಇಸ್ರಾಯೇಲರ ಕುಲಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.


ಅವರು ತನಗಿಂತ ಬಲಿಷ್ಠರೆಂದು ತಿಳಿದುಕೊಂಡು ಮೀಕನು ಹಿಂದಿರುಗಿ ಮನೆಗೆ ಹೋದನು.


ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು