ನ್ಯಾಯಸ್ಥಾಪಕರು 18:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆ ಪಟ್ಟಣವು ಚೀದೋನಿಗೆ ದೂರವಾಗಿದ್ದುದರಿಂದಲೂ, ಸಮೀಪದಲ್ಲಿ ಪರಿಚಯಸ್ಥರು ಯಾರು ಇಲ್ಲದೆ ಇದ್ದುದರಿಂದಲೂ, ಅವರಿಗೆ ಸಹಾಯದೊರಕಲಿಲ್ಲ. ಬೇತ್ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆ ಪಟ್ಟಣ ಚೀದೋನಿಗೆ ದೂರವಾಗಿದ್ದರಿಂದಲೂ ಸಮೀಪದಲ್ಲಿ ಪರಿಚಯಸ್ಥರಾರೂ ಇಲ್ಲದ್ದರಿಂದಲೂ ಅವರಿಗೆ ಸಹಾಯ ದೊರಕಲಿಲ್ಲ. ಬೇತ್ ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ತಿರುಗಿ ಕಟ್ಟಿಸಿ ಅದರಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆ ಪಟ್ಟಣವು ಚೀದೋನಿಗೆ ದೂರವಾಗಿದ್ದದ್ದರಿಂದಲೂ ಸಮೀಪದಲ್ಲಿ ಪರಿಚಯಸ್ಥರಾರೂ ಇಲ್ಲದ್ದರಿಂದಲೂ ಅವರಿಗೆ ಸಹಾಯದೊರಕಲಿಲ್ಲ. ಬೇತ್ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ತಿರಿಗಿ ಕಟ್ಟಿಸಿ ಅದರಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಲಯಿಷಿನಲ್ಲಿ ವಾಸಮಾಡುತ್ತಿದ್ದ ಜನರನ್ನು ರಕ್ಷಿಸುವವರು ಯಾರೂ ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹುದೂರದಲ್ಲಿದ್ದ ಕಾರಣ ಅವರೂ ಬರುವಂತಿರಲಿಲ್ಲ. ಲಯಿಷಿನವರು ಆರಾಮಿನ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಂಡಿರಲಿಲ್ಲ. ಹೀಗಾಗಿ ಅವರೂ ಸಹಾಯಕ್ಕೆ ಬರಲಿಲ್ಲ. ಬೇತ್‌ರೆಹೋಬಿನ ಕಣಿವೆಯಲ್ಲಿದ್ದ ಈ ನಗರವನ್ನು ದಾನ್ಯರು ಹೊಸದಾಗಿ ಕಟ್ಟಿದರು. ಆ ನಗರವು ಅವರ ವಾಸಸ್ಥಾನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅದು ಸೀದೋನಿಗೆ ದೂರವಾಗಿದ್ದುದರಿಂದಲೂ, ಯಾವ ಮನುಷ್ಯನ ಸಂಗಡಲಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ಅವರನ್ನು ಕಾಪಾಡಲು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್‌ರೆಹೋಬಿಗೆ ಸಮೀಪವಾದ ತಗ್ಗಿನಲ್ಲಿ ಇತ್ತು. ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿ |