Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲ್ಯರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದಾನ್ಯರು ದಾನ್ ನಗರದಲ್ಲಿ ಆ ವಿಗ್ರಹಗಳನ್ನು ಪ್ರತಿಷ್ಠಾಪಿಸಿದರು. ಅವರು ಗೇರ್ಷೋಮನ ಮಗನಾದ ಯೆಹೋನಾತಾನನನ್ನು ತಮ್ಮ ಯಾಜಕನನ್ನಾಗಿ ಮಾಡಿಕೊಂಡರು. ಗೇರ್ಷೋಮನು ಮೋಶೆಯ ಮಗನಾಗಿದ್ದನು. ಇಸ್ರೇಲರನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗುವವರೆಗೆ ಯೆಹೋನಾತಾನನು ಮತ್ತು ಅವನ ಮಕ್ಕಳು ದಾನ್ಯರ ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅಲ್ಲಿ ದಾನ್ಯರು ಕೆತ್ತಿದ ವಿಗ್ರಹವನ್ನು ತಮಗಾಗಿ ಸ್ಥಾಪಿಸಿಕೊಂಡರು. ಇಸ್ರಾಯೇಲರು ಸೆರೆಯಾಗಿ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ಅವನ ಮಕ್ಕಳೂ ದಾನನ ಗೋತ್ರದವರಿಗೆ ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:30
20 ತಿಳಿವುಗಳ ಹೋಲಿಕೆ  

ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ, ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು, ತನ್ನ ಮಕ್ಕಳಲ್ಲಿ ಒಬ್ಬನನ್ನು ಅರ್ಚಕ ಸೇವೆಗಾಗಿ ಪ್ರತಿಷ್ಠಿಸಿದನು.


ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು” ಎಂದು ಹೇಳಿ,


ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದುದರಿಂದ ಆತನು ಅವರನ್ನು ನಲ್ವತ್ತು ವರ್ಷಗಳ ಕಾಲ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.


ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.


ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.


“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.


“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.


ಆ ಪುತ್ರರಲ್ಲಿ ಒಬ್ಬನಿಗೆ “ಗೇರ್ಷೋಮ್” ಎಂದು ಹೆಸರಿಟ್ಟನು. ಏಕೆಂದರೆ ಮೋಶೆಯು, “ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆ” ಎಂದು ಹೇಳಿದನು.


ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.


ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.


ಇಸ್ರಾಯೇಲರು ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದು ಅವನು ಮಾಡಿದ ಪಾಪಗಳನ್ನು ತೊರೆದು ಬಿಡಲಿಲ್ಲ.


ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು