Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು, “ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನು, “ಸಮಾಧಾನದಿಂದ ಹೋಗಿ ಸರ್ವೇಶ್ವರ ನಿಮ್ಮ ಪ್ರಯಾಣವನ್ನು ಆಶೀರ್ವದಿಸುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು - ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಯಾಜಕನು, “ಸಮಾಧಾನದಿಂದ ಹೋಗಿರಿ; ಯೆಹೋವನು ನಿಮಗೆ ಮಾರ್ಗದರ್ಶನ ಮಾಡುತ್ತಾನೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ಯಾಜಕನು, “ಸಮಾಧಾನವಾಗಿ ಹೋಗಿರಿ. ನೀವು ಹೋಗುವ ನಿಮ್ಮ ಮಾರ್ಗಕ್ಕೆ ಯೆಹೋವ ದೇವರ ಒಪ್ಪಿಗೆ ಇದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:6
12 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ.


ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.


ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.


ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.


ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ವರ್ಷದ ಪ್ರಾರಂಭ ಮೊದಲುಗೊಂಡು ಕೊನೆಯ ವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.


ಆಗ ಅವರು ಅವನಿಗೆ, “ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು” ಎಂದು ಬೇಡಿಕೊಳ್ಳಲು


ಆ ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು


ಆಗ ಏಲಿಯು ಆಕೆಗೆ, “ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ” ಎಂದನು.


ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, “ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು” ಎಂದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು