Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಇಳಿದುಕೊಳ್ಳುವುದಕ್ಕೋಸ್ಕರ ಗಿಬೆಯಕ್ಕೆ ಹೋದರು. ಆದರೆ ಯಾರೂ ಅವರನ್ನು ಮನೆಯಲ್ಲಿ ಉಳಿದುಕೊಳ್ಳಲು ಅವಕಾಶಕೊಡದ ಕಾರಣ ಅವರು ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದುದರಿಂದ ಅವರು ತಂಗುವುದಕ್ಕಾಗಿ ಗಿಬೆಯಕ್ಕೆ ಹೋಗಿ, ಯಾರೂ ಮನೆಯಲ್ಲಿ ಸೇರಿಸಿಕೊಳ್ಳದೆ ಹೋದುದರಿಂದ ಸಂತೆ ಬೀದಿಯಲ್ಲೇ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದದರಿಂದ ಅವರು ಇಳುಕೊಳ್ಳುವದಕ್ಕೋಸ್ಕರ ಗಿಬೆಯಕ್ಕೆ ಹೋಗಿ ಯಾರೂ ಮನೆಯಲ್ಲಿ ಸೇರಿಸಿಕೊಳ್ಳದ್ದರಿಂದ ಸಂತೇ ಬೀದಿಯಲ್ಲಿ ಕೂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರು ಗಿಬೆಯದಲ್ಲಿ ತಮ್ಮ ಪ್ರಯಾಣವನ್ನು ನಿಲ್ಲಿಸಿದರು. ಅಂದು ರಾತ್ರಿ ಆ ನಗರದಲ್ಲಿ ಇರುವುದಕ್ಕೆ ನಿರ್ಧಾರ ಮಾಡಿದರು. ಅವರು ನಗರದ ಬೀದಿಯ ಮುಖ್ಯಸ್ಥಳಕ್ಕೆ ಬಂದು ಅಲ್ಲಿ ಕುಳಿತುಕೊಂಡರು. ಯಾರೂ ಅವರನ್ನು ಆ ರಾತ್ರಿ ತಮ್ಮ ಮನೆಯಲ್ಲಿ ಇರಲು ಕರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಅವರು ಗಿಬೆಯದಲ್ಲಿ ರಾತ್ರಿ ಕಳೆಯಲು ಉಳಿದರು. ಅವರು ಹೋಗಿ ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು. ಮನೆಯಲ್ಲಿ ಇಳಿದುಕೊಳ್ಳುವುದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:15
9 ತಿಳಿವುಗಳ ಹೋಲಿಕೆ  

ಆ ಲೇವಿಯನು ಅವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮಿನ ಪರ್ವತಪ್ರದೇಶದ ಒಂದು ದೂರಸ್ಥಳದಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು; ಈಗ ತಿರುಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಸೇರಿಸಿಕೊಳ್ಳಲಿಲ್ಲ.


ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.


ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;


ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು.


ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು.


ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು, “ನಾನು ನನ್ನ ಉಪಪತ್ನಿಯ ಸಹಿತವಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಉಳಿದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು