Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇನ್ನೂ ಮದುವೆಯಾಗದೆ ಇರುವ ನನ್ನ ಮಗಳನ್ನೂ, ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇನ್ನೂ ಮದುವೆಯಾಗದಂಥ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ. ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಮಾಡಿ; ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇನ್ನೂ ಮದುವೆಯಾಗದಂಥ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇಲ್ಲಿ ನೋಡಿರಿ, ನನ್ನ ಮಗಳಿದ್ದಾಳೆ. ಅವಳು ಯಾರೊಂದಿಗೂ ಈವರೆಗೆ ಸಂಭೋಗ ಮಾಡಿಲ್ಲ. ನಾನು ಅವಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ಕರೆದುಕೊಂಡು ಬರುತ್ತೇನೆ. ನಿಮ್ಮ ಮನಸ್ಸಿಗೆ ಬಂದಂತೆ ಅವರನ್ನು ಬಳಸಿಕೊಳ್ಳಿ. ನೀವು ಅವರನ್ನು ಹಿಂಸಿಸಿದರೂ ಆ ಮನುಷ್ಯನ ವಿರೋಧವಾಗಿ ಅಂಥ ಭಯಂಕರ ಪಾಪವನ್ನು ಮಾಡಬೇಡಿ” ಎಂದು ಅವರನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕನ್ನಿಕೆಯಾದ ನನ್ನ ಮಗಳೂ, ಅವನ ಉಪಪತ್ನಿಯನ್ನೂ ಹೊರಗೆ ತರುವೆನು. ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ, ಆ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:24
5 ತಿಳಿವುಗಳ ಹೋಲಿಕೆ  

ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು.


ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.


ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.


“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.


ಆದರೆ ಅವರು ಆ ಮುದುಕನಿಗೆ ಕಿವಿಗೊಡದೆ ಹೋದುದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಬಳಿಗೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ, ರಾತ್ರಿಯೆಲ್ಲಾ ಬಹುಕ್ರೂರತನದಿಂದ ವರ್ತಿಸಿ, ಬೆಳಗಾಗುವಾಗ ಆಕೆಯನ್ನು ಬಿಟ್ಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು