ನ್ಯಾಯಸ್ಥಾಪಕರು 19:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದರೆ ಅವರು ಆ ಮುದುಕನಿಗೆ ಕಿವಿಗೊಡದೆ ಹೋದುದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಬಳಿಗೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ, ರಾತ್ರಿಯೆಲ್ಲಾ ಬಹುಕ್ರೂರತನದಿಂದ ವರ್ತಿಸಿ, ಬೆಳಗಾಗುವಾಗ ಆಕೆಯನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆದರೆ ಅವರು ಆ ಮುದುಕನಿಗೆ ಕಿವಿಗೊಡಲೊಲ್ಲದೆ ಹೋದರು. ಆದುದರಿಂದ ಆ ಲೇವಿಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಮಧ್ಯಕ್ಕೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ರಾತ್ರಿಯೆಲ್ಲಾ ಬಹುಕ್ರೂರತನದಿಂದ ನಡಿಸಿ, ಕೋಳಿ ಕೂಗುವ ಹೊತ್ತಾಗಲು ಬಿಟ್ಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದರೆ ಅವರು ಆ ಮುದುಕನಿಗೆ ಕಿವಿಗೊಡಲೊಲ್ಲದೆ ಹೋದದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಮಧ್ಯಕ್ಕೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ ರಾತ್ರಿಯಲ್ಲೆಲ್ಲಾ ಬಹುಕ್ರೂರತನದಿಂದ ನಡಿಸಿ ಕೋಳಿಕೂಗುವ ಹೊತ್ತಾಗಲು ಬಿಟ್ಟು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದರೆ ಆ ನೀಚರು ಆ ವೃದ್ಧನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಆಗ ಆ ಲೇವಿಯು ತನ್ನ ಉಪಪತ್ನಿಯನ್ನು ಹೊರಗೆ ಕರೆದುಕೊಂಡು ಹೋಗಿ ಆ ನೀಚರಿಗೆ ಒಪ್ಪಿಸಿದನು. ಆ ನೀಚರು ಅವಳನ್ನು ಪೀಡಿಸಿ ಇಡೀ ರಾತ್ರಿ ಅವಳನ್ನು ಸಂಭೋಗಿಸಿದರು. ಬೆಳಗಿನ ಜಾವ ಅವಳನ್ನು ಹೋಗಲು ಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದ್ದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು. ಅವರು ಅವಳನ್ನು ತೆಗೆದುಕೊಂಡು ಉದಯಕಾಲದ ಪರ್ಯಂತರ ರಾತ್ರಿಯೆಲ್ಲಾ ಕೆಡಿಸಿ, ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು. ಅಧ್ಯಾಯವನ್ನು ನೋಡಿ |