Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು, “ದಯವಿಟ್ಟು ಮಧ್ಯಾಹ್ನದವರೆಗೆ ಇಲ್ಲೇ ಇದ್ದು ಬಲಹೊಂದು” ಎಂದು ಅವನನ್ನು ಬೇಡಿಕೊಳ್ಳಲು ಅವರು ತಿರುಗಿ ಊಟಕ್ಕೆ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆ, “ದಯವಿಟ್ಟು ಇಳಿಹೊತ್ತಿನವರೆಗೆ ಇಲ್ಲೇ ಇದ್ದು ವಿಶ್ರಮಿಸಿಕೋ,” ಎಂದು ಅವನನ್ನು ಬೇಡಿಕೊಳ್ಳಲು ಅವನು ಮತ್ತೆ ಊಟಕ್ಕೆ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು - ದಯವಿಟ್ಟು ಇಳಿಹೊತ್ತಿನವರೆಗೆ ಇಲ್ಲೇ ಇದ್ದು ಬಲಹೊಂದು ಎಂದು ಅವನನ್ನು ಬೇಡಿಕೊಳ್ಳಲು ತಿರಿಗಿ ಊಟಕ್ಕೆ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಐದನೆಯ ದಿನ ಆ ಲೇವಿಯು ಬೆಳಗಿನ ಜಾವ ಬೇಗ ಎದ್ದು ಹೊರಡಲು ಸಿದ್ಧನಾಗಿದ್ದನು. ಆದರೆ ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಊಟಮಾಡು; ವಿಶ್ರಾಂತಿ ತೆಗೆದುಕೋ. ಈ ರಾತ್ರಿ ಇಲ್ಲಿಯೇ ಇರು” ಎಂದು ಕೇಳಿಕೊಂಡನು. ಅವರಿಬ್ಬರು ಮತ್ತೆ ಊಟ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಐದನೆಯ ದಿನದ ಮುಂಜಾನೆ ಅವನು ಹೊರಡಲು ಎದ್ದೇಳುವಾಗ, ಆ ಸ್ತ್ರೀಯ ತಂದೆಯು, “ವಿಶ್ರಮಿಸಿಕೋ, ಮಧ್ಯಾಹ್ನದವರೆಗೆ ಇರು,” ಎಂದನು. ಅದರಂತೆ ಅವರಿಬ್ಬರು ಒಟ್ಟಾಗಿ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:8
4 ತಿಳಿವುಗಳ ಹೋಲಿಕೆ  

ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು” ಎಂದು ಹೇಳಲು


ಆದರೆ ಅವನ ಮಾವನು ಬಹಳ ಒತ್ತಾಯ ಮಾಡಿದ್ದರಿಂದ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು.


ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು” ಎಂದು ಬೇಡಿಕೊಂಡನು.


ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು