ನ್ಯಾಯಸ್ಥಾಪಕರು 19:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅನಂತರ ಅವನು, ಅವನ ಉಪಪತ್ನಿ ಹಾಗು ಸೇವಕನು ಹೋಗುವುದಕ್ಕ ಸಿದ್ಧರಾಗಲು ಆ ಸ್ತ್ರೀಯ ತಂದೆ ಅಳಿಯನಿಗೆ, “ಹೊತ್ತುಮೀರಿತು; ಸಂಜೆ ಆಯಿತು. ದಯವಿಟ್ಟು ಈ ದಿನ ರಾತ್ರಿ ಇಲ್ಲೇ ಇರು; ನೋಡು, ಸಂಜೆಯಾಗಿಹೋಯಿತು. ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅನಂತರ ಅವನೂ ಅವನ ಉಪಪತ್ನಿಯೂ ಸೇವಕನೂ ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ - ಹೊತ್ತು ಹೋಯಿತು; ಸಂಜೆಯಾಯಿತು. ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಸಾಯಂಕಾಲವಾಯಿತು. ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು ಎಂದು ಬೇಡಿಕೊಂಡರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಮೇಲೆ ಆ ಲೇವಿಯೂ ಅವನ ಉಪಪತ್ನಿಯೂ ಅವನ ಆಳೂ ಹೊರಡಲು ಎದ್ದರು. ಆದರೆ ಆ ಸ್ತ್ರೀಯ ತಂದೆಯು, “ಈಗ ಕತ್ತಲಾಗುತ್ತಾ ಬಂತು, ಹೊತ್ತು ಮುಳುಗುವುದರಲ್ಲಿದೆ. ಈ ರಾತ್ರಿ ಇಲ್ಲಿಯೇ ಸಂತೋಷದಿಂದ ಕಾಲ ಕಳೆಯಿರಿ. ನಾಳೆ ಬೆಳಿಗ್ಗೆ ನೀವು ಬೇಗನೆ ಎದ್ದು ಪ್ರಯಾಣಮಾಡಬಹುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನೂ, ಅವನ ಉಪಪತ್ನಿಯೂ ಅವನ ಸೇವಕನೂ ಹೋಗುವುದಕ್ಕೆ ಎದ್ದಾಗ, ಅವನ ಮಾವನು ಅವನಿಗೆ, “ಇಗೋ, ಹೊತ್ತು ಹೋಗಿ ಸಂಜೆ ಆಯಿತು. ಈ ರಾತ್ರಿ ನೀನು ದಯಮಾಡಿ ಇಲ್ಲೇ ಇರು; ಹೊತ್ತು ಮುಣುಗುತ್ತಾ ಬಂತು. ನೀನು ಈ ರಾತ್ರಿ ಇಲ್ಲಿದ್ದು, ನಿನ್ನ ಗುಡಾರಕ್ಕೆ ನಾಳೆ ಬೆಳಿಗ್ಗೆ ಎದ್ದು, ನಿಮ್ಮ ಮಾರ್ಗ ಹಿಡಿದು ಹೋಗಬಹುದು,” ಎಂದನು. ಅಧ್ಯಾಯವನ್ನು ನೋಡಿ |