Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ ಯೆಹೋವನನ್ನೂ ಆತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ಪೀಳಿಗೆಯವರೆಲ್ಲರು ಸತ್ತುಹೋದ ಮೇಲೆ ಮುಂದಿನ ಪೀಳಿಗೆಯು ಬೆಳೆಯಿತು. ಈ ಹೊಸ ಪೀಳಿಗೆಗೆ ಯೆಹೋವನ ಬಗ್ಗೆ ಮತ್ತು ಯೆಹೋವನು ಇಸ್ರೇಲಿನ ಜನರಿಗಾಗಿ ಮಾಡಿದ ಮಹತ್ಕಾರ್ಯಗಳ ಬಗ್ಗೆ ಏನೂ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ, ಯೆಹೋವ ದೇವರನ್ನೂ ಅವರು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:10
26 ತಿಳಿವುಗಳ ಹೋಲಿಕೆ  

ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.


“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.


ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.


ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.


ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.


ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು.


ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.


ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.


ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.


ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.


ಆ ನಂತರ ಯೋಸೇಫನೂ, ಅವನ ಅಣ್ಣತಮ್ಮಂದಿರೂ, ಆ ಸಂತತಿಯವರೆಲ್ಲರೂ ಮರಣ ಹೊಂದಿದರು.


ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.


ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲರಿಗೋಸ್ಕರ ನಡೆಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಆರಾಧಿಸುತ್ತಿದ್ದರು.


ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.


ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.


ಕಡೆಯಲ್ಲಿ ಆ ಹೆಂಗಸೂ ಸತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು