Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿ ಬಿಟ್ಟನು; ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:14
35 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.


ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?


ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.


ಯೆಹೋವನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ಒಪ್ಪಿಸಿಕೊಟ್ಟನು. ಹರೋಷೆತ್ ಹಗೊಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಧಿಪತಿಯಾಗಿದ್ದನು.


ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು; ಶತ್ರುಗಳ ಮುಂದೆ ನಿಲ್ಲಲಾರದೆ ತತ್ತರಿಸುವಿರಿ.


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”


ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.


ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.


ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.


ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.


ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,


ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟಿದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನು ಉಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.


“ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.


ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.


ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.


ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.


ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದ ಇಲ್ಲಿಯವರೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನೀನು ಶತ್ರುಭಯವಿಲ್ಲದೆ ನೆಮ್ಮದಿಯಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.


ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.


ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು.


ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.


ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.


ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.


ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.


ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು