Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಂಥ ನ್ಯಾಯಾಧಿಪತಿಗಳು ತೀರಿಹೋದ ನಂತರ ಇಸ್ರಯೇಲರು ಮತ್ತೆ ತಮ್ಮ ಹಿಂದಿನವರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಸೇವೆಮಾಡಿ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಠಮಾರಿತನವನ್ನೂ ಬಿಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲ್ಯರು ತಿರುಗಿಕೊಂಡು ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ ಸೇವಿಸಿ ಅವುಗಳಿಗೆ ಅಡ್ಡಬಿದ್ದರು; ಅವರು ಈ ತಮ್ಮ ದುರ್ಮಾರ್ಗವನ್ನೂ ಮೊಂಡತನವನ್ನೂ ಬಿಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಪ್ರತಿಯೊಬ್ಬ ನ್ಯಾಯಾಧೀಶನು ಮರಣಹೊಂದಿದಾಗ ಇಸ್ರೇಲರು ಪುನಃ ಪಾಪ ಮಾಡುತ್ತಿದ್ದರು ಮತ್ತು ತಮ್ಮ ಪೂರ್ವಿಕರಿಗಿಂತಲೂ ಭ್ರಷ್ಠರಾಗಿ ಸುಳ್ಳುದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬೀಳಲಾರಂಭಿಸುತ್ತಿದ್ದರು. ಇಸ್ರೇಲರು ತುಂಬ ಮೊಂಡರಾಗಿದ್ದು ತಮ್ಮ ದುರ್ನಡತೆಗಳನ್ನು ಬಿಡಲು ಸಿದ್ಧರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆ ನ್ಯಾಯಾಧಿಪತಿಯ ಮರಣದ ನಂತರ, ಅವರು ತಿರುಗಿ ಮಾರ್ಗತಪ್ಪಿ, ಅನ್ಯದೇವರುಗಳನ್ನು ಹಿಂಬಾಲಿಸಿ ಹೋಗಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಹಿರಿಯರಿಗಿಂತ ಅಧಿಕ ಭ್ರಷ್ಟರಾದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಟಮಾರಿತನವನ್ನೂ ಬಿಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:19
20 ತಿಳಿವುಗಳ ಹೋಲಿಕೆ  

ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‌ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.


ಏಹೂದನು ಮರಣಹೊಂದಿದ ನಂತರ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾಗಿದ್ದರು.


ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.


ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,


ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.


ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.


ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಬದುಕಿದ್ದ, ಯೆಹೋವನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವನನ್ನು ಸೇವಿಸುತ್ತಿದ್ದರು.


ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲರಿಗೋಸ್ಕರ ನಡೆಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಆರಾಧಿಸುತ್ತಿದ್ದರು.


ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.


ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.


ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.


ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.


ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರಂತೆ ನಿಮ್ಮನ್ನು ನೀವೇ ಹೊಲಸು ಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯ ವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹ ಮಾಡುತ್ತೀರೋ?


ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.


ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.


ಉಪಶಮನವನ್ನು ಪಡೆದ ಮೇಲೆ ಅವರು ತಿರುಗಿ ದ್ರೋಹಿಗಳಾಗಿ ನಡೆಯುತ್ತಿರುವುದನ್ನು ನೀನು ಕಂಡು ಅವರ ಮೇಲೆ ದೊರೆತನ ನಡೆಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದೆ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪುನಃ ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು