Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲ್ಯರೆಲ್ಲರೂ ಏಕಮನಸ್ಸಿನಿಂದ ಹೊರಟು ವಿುಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ನೆರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಇಸ್ರಾಯೇಲರೆಲ್ಲರು ಹೊರಟು ಗಿಲ್ಯಾದ್ ಸಹಿತವಾಗಿ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಒಬ್ಬ ಮನುಷ್ಯನಂತೆ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:1
35 ತಿಳಿವುಗಳ ಹೋಲಿಕೆ  

ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.


ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ” ಅಂದನು.


ಸಮುವೇಲನು ಇಸ್ರಾಯೇಲ್ಯರನ್ನು ಮಿಚ್ಪೆಗೆ ಕರೆಯಿಸಿ ಯೆಹೋವನ ಸನ್ನಿಧಿಯಲ್ಲಿ ಸೇರಿಸಿಕೊಂಡನು.


ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು.


ಮತ್ತು ಯೆಹೋವನ ಮುಂದೆ ಸಭೆ ಸೇರಿದಾಗ, ಬಾರದೆ ಇದ್ದಂಥ ಇಸ್ರಾಯೇಲರು ಯಾರಾರೆಂದು ವಿಚಾರಮಾಡಿದರು. ಯಾಕೆಂದರೆ ಮಿಚ್ಪೆಯಲ್ಲಿ, “ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದು ಹಾಕುವೆವು” ಎಂದು ಆಣೆಯಿಟ್ಟು ಪ್ರಮಾಣಮಾಡಿದ್ದರು.


ಅವರೆಲ್ಲರೂ ಶೀಲೋವಿನಲ್ಲಿ ಒಟ್ಟಿಗೆ ಸೇರಿ ಅವರೊಡನೆ ಹೋರಾಡಲು ಸಿದ್ಧರಾದರು.


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.


ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ” ಎಂದು ಅವನಿಗೆ ಆಜ್ಞಾಪಿಸಿದನು.


ಸೆರೆವಾಸದಿಂದ ಹಿಂದಿರುಗಿ ಬಂದು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.


ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.


ದಾವೀದನು ಯೋವಾಬನನ್ನೂ ಮತ್ತು ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ, ಇಸ್ರಾಯೇಲರನ್ನು ಲೆಕ್ಕ ಮಾಡಿಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.


ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.


ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.


ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು.


ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.


ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು.


ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರೋಧವಾಗಿ ಕೂಡಿಕೊಂಡರು.


ಇದನ್ನು ಕೇಳಿ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗದಿರಲಿ.


ಆ ದೇವಜನರ ಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ, ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.


ಮೊದಲು ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ದಾನ್ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲಪುರುಷನೂ ಇಸ್ರಾಯೇಲನ ಮಗನೂ ಆದ ದಾನನ ಹೆಸರು.


ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಳ್ಳಲು ಇಸ್ರಾಯೇಲರು ಸೇರಿ ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.


ಯೋಸೇಫನ ಚೊಚ್ಚಲ ಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವತ್ತಿನ ವಿವರ: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾಗಿದ್ದನು. ಆದ್ದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಸಿಕ್ಕಿದವು.


ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.


ಮಿಚ್ಪೆ, ಕೆಫೀರಾ, ಮೋಚಾ,


ದಿಲಾನ್, ಮಿಚ್ಪೆ, ಯೊಕ್ತೇಲ್,


ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.


ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು.


ಸುಮಾರು ನಲವತ್ತು ಸಾವಿರ ಭಟರು ಯುದ್ಧಮಾಡುವುದಕ್ಕಾಗಿ ಯೆಹೋವನ ಸಮ್ಮುಖದಲ್ಲಿ ಯೆರಿಕೋವಿನ ಬೈಲಿಗೆ ಬಂದರು:


ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವತ್ತಾದ ಗಿಲ್ಯಾದ್ ದೇಶಕ್ಕೆ ಹೊರಟು ಹೋದರು.


ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.


ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,


ಹಚರ್‌ ಷೂವಾಲ್ ಹಾಗು ಬೇರ್ಷೆಬ ಇವುಗಳೂ ಮತ್ತು ಇವುಗಳ ಗ್ರಾಮಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು