Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲ್ಯರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಾಯೇಲರಲ್ಲಿ ನಡೆಸಿದ ದುಷ್ಟ ಕಾರ್ಯಕ್ಕಾಗಿ ಅವರಿಗೆ ದಂಡನೆಮಾಡೋಣ” ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರವೇ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಯೇಲರಲ್ಲಿ ನಡೆಸಿದ ದುಷ್ಕರ್ಮಕ್ಕಾಗಿ ಅವರನ್ನು ದಂಡಿಸೋಣ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ್ಯರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಾಯೇಲ್ಯರಲ್ಲಿ ನಡಿಸಿದ ದುಷ್ಕರ್ಮಕ್ಕಾಗಿ ಅವರಿಗೆ ದಂಡನೆ ಮಾಡೋಣ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾವು ಇಸ್ರೇಲಿನ ಎಲ್ಲ ಕುಲಗಳಲ್ಲಿ ಪ್ರತಿ ನೂರು ಮಂದಿಗೆ ಹತ್ತು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಸಾವಿರ ಮಂದಿಗೆ ನೂರು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಹತ್ತು ಸಾವಿರ ಮಂದಿಗೆ ಒಂದು ಸಾವಿರ ಮಂದಿಯನ್ನು ಆರಿಸಿಕೊಳ್ಳೋಣ. ಹೀಗೆ, ನಾವು ಆರಿಸಿಕೊಂಡ ಜನರು ಸೈನ್ಯಕ್ಕೆ ಆಹಾರ ಸರಬರಾಜು ಮಾಡಲಿ. ಆಮೇಲೆ ಬೆನ್ಯಾಮೀನ್ಯರ ಪ್ರದೇಶದಲ್ಲಿರುವ ಗಿಬೆಯಕ್ಕೆ ಸೈನ್ಯ ಕಳುಹಿಸೋಣ. ಇಸ್ರೇಲರಿಗೆ ಹೀಗೆ ನಿಂದೆಗೆ ಗುರಿಮಾಡಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ದೊರಕಲಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಬೆನ್ಯಾಮೀನನ ಗೋತ್ರದವರಾದ ಗಿಬೆಯದವರು ಇಸ್ರಾಯೇಲಿನಲ್ಲಿ ಮಾಡಿದ ಈ ಅತಿರೇಕದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತೆಗೆದುಕೊಂಡು ಬರುವುದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:10
7 ತಿಳಿವುಗಳ ಹೋಲಿಕೆ  

ನಾವು ಚೀಟು ಹಾಕೋಣ; ಅದು ಬಿದ್ದ ಪ್ರಕಾರವೇ ಗಿಬೆಯದವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ.


ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರೋಧವಾಗಿ ಕೂಡಿಕೊಂಡರು.


“‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.


ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.


ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು’” ಎಂದು ಹೇಳು ಎಂಬುದೇ.


ಅವರು ಇಸ್ರಾಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಮತ್ತು ಕ್ರೂರ ಕೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.


ಇಸ್ರಾಯೇಲರೆಲ್ಲರೂ ಮಿಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು