Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ಸನ್ನದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಯೇಲರ ವಿರುದ್ಧ ಯುದ್ಧಕ್ಕೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬೆನ್ಯಾಮೀನ್ಯರು ತಮ್ಮ ನಗರಗಳನ್ನು ಬಿಟ್ಟು ಇಸ್ರೇಲಿನ ಬೇರೆ ಕುಲಗಳ ಜನರೊಂದಿಗೆ ಯುದ್ಧಮಾಡಲು ಗಿಬೆಯ ನಗರಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಸ್ರಾಯೇಲರ ಸಂಗಡ ಯುದ್ಧಮಾಡುವುದಕ್ಕೆ ಹೊರಡುವ ಹಾಗೆ ಪಟ್ಟಣಗಳಲ್ಲಿಂದ ಗಿಬೆಯದಲ್ಲಿ ಬಂದು ಕೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:14
6 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು.


ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.


ಆದರೆ ಎದೋಮ್ಯರು, “ನೀವು ದಾಟಲೇ ಬಾರದು” ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು.


ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು.


ಆ ದಿನದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಸೇರಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು