ನ್ಯಾಯಸ್ಥಾಪಕರು 20:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಈ ಎಲ್ಲಾ ಜನರಲ್ಲಿ ಏಳುನೂರು ಜನರು ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬರು ಕೂದಲೆಳೆಯಷ್ಟು ಗುರಿತಪ್ಪದ ಹಾಗೆ ಕವಣೆಯನ್ನು ಹೊಡೆಯುವುದರಲ್ಲಿ ನಿಪುಣರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಈ ಎಲ್ಲ ಜನರಲ್ಲಿ ಏಳುನೂರು ಮಂದಿ ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬನು ಕೂದಲ ಎಳೆಯಷ್ಟೂ ಗುರಿತಪ್ಪದ ಹಾಗೆ ಕವಣೆಯನ್ನು ಹೊಡೆಯುವುದರಲ್ಲಿ ನಿಪುಣನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈ ಎಲ್ಲಾ ಜನರಲ್ಲಿ ಏಳು ನೂರು ಮಂದಿ ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬನೂ ಕೂದಲೆಳೆಯಷ್ಟೂ ಗುರಿ ತಪ್ಪದ ಹಾಗೆ ಕವಣೆಯನ್ನು ಹೊಡಿಯುವದರಲ್ಲಿ ನಿಪುಣನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಇದಲ್ಲದೆ ಎಡಚರಾಗಿದ್ದ ಏಳುನೂರು ಮಂದಿ ಸೈನಿಕರು ಸಹ ಅಲ್ಲಿದ್ದರು. ಅವರು ಸಹ ತರಬೇತಿ ಪಡೆದವರಾಗಿದ್ದರು. ಅವರಲ್ಲಿ ಪ್ರತಿಯೊಬ್ಬನೂ ಕೂದಲೆಳೆಯಷ್ಟೂ ಗುರಿತಪ್ಪದೆ ಕವಣೆಯನ್ನು ಹೊಡೆಯುವದರಲ್ಲಿ ನಿಪುಣನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಈ ಸಮಸ್ತ ಜನರಲ್ಲಿ ಆರಿಸಿದ ಏಳು ನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು. ಅಧ್ಯಾಯವನ್ನು ನೋಡಿ |