Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಸ್ರಾಯೇಲ್ಯರು ಬೇತೇಲಿಗೆ ಹೋಗಿ - ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಯೆಹೋವನನ್ನು ಕೇಳಲು ಆತನು - ಮೊದಲು ಯೆಹೂದಕುಲದವರು ಹೋಗಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಇಸ್ರಾಯೇಲರು ಬೇತೇಲಿಗೆ ಹೋಗಿ, ತಮ್ಮಲ್ಲಿ ಮೊದಲು ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕಾದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಮೊದಲು ಹೋಗಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:18
15 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು.


ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.


ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.


ಇಲ್ಲಿ ಕೂಡಿರುವ ಎಲ್ಲಾ ಇಸ್ರಾಯೇಲರೇ, ಈಗ ನಿಮ್ಮ ಆಲೋಚನೆ ಮತ್ತು ಅಭಿಪ್ರಾಯಗಳನ್ನು ಹೇಳಿರಿ” ಅಂದನು.


ಆ ಲೇವಿಯನು ಅವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮಿನ ಪರ್ವತಪ್ರದೇಶದ ಒಂದು ದೂರಸ್ಥಳದಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು; ಈಗ ತಿರುಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಸೇರಿಸಿಕೊಳ್ಳಲಿಲ್ಲ.


ಶೀಲೋವಿನಲ್ಲಿ ದೇವದರ್ಶನ ಗುಡಾರವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.


ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.


ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು.


ಬೆನ್ಯಾಮೀನ್ಯರಲ್ಲದ ಇಸ್ರಾಯೇಲರಲ್ಲಿ ನಾಲ್ಕು ಲಕ್ಷ ಯೋಧರಿದ್ದರು; ಇವರೆಲ್ಲರೂ ವೀರರಾಗಿದ್ದರು.


ಇಸ್ರಾಯೇಲ್ಯರು ಬೆಳಗ್ಗೆ ಹೊರಟುಹೋಗಿ ಗಿಬೆಯದ ಎದುರಿನಲ್ಲಿ ಪಾಳೆಯಮಾಡಿಕೊಂಡು,


ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್‌ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು