Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಪಟ್ಟಣದ ಮುಂದೆ ಬಂದರು; ಅವರು ಸುಮಾರು ಹತ್ತು ಸಾವಿರ ಮಂದಿ ಯುದ್ಧವೀರರು. ಯುದ್ಧವು ಬಹುಘೋರವಾಯಿತು. ತಮಗೆ ಅಪಾಯವು ಒದಗಿ ಬಂದಿದೆ ಎಂಬುದು ಬೆನ್ಯಾಮೀನ್ಯರಿಗೆ ಇನ್ನೂ ಗೊತ್ತಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವರ ಸಂಖ್ಯೆ ಸುಮಾರು ಹತ್ತು ಸಾವಿರ ಮಂದಿ ಯುದ್ಧವೀರರು. ಯುದ್ಧ ಬಹಳ ಘೋರವಾಯಿತು. ತಮಗೆ ಅಪಾಯ ಒದಗಿಬಂದಿದೆ ಎಂಬುದು ಬೆನ್ಯಾಮೀನ್ಯರಿಗೆ ಇನ್ನೂ ಗೊತ್ತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಪಟ್ಟಣದ ಮುಂದೆ ಬಂದರು; ಅವರು ಸುಮಾರು ಹತ್ತು ಸಾವಿರ ಮಂದಿ ಯುದ್ಧವೀರರು. ಯುದ್ಧವು ಬಹು ಘೋರವಾಯಿತು. ತಮಗೆ ಅಪಾಯವು ಒದಗಿ ಬಂದದೆ ಎಂಬದು ಬೆನ್ಯಾಮೀನ್ಯರಿಗೆ ಇನ್ನೂ ಗೊತ್ತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಇಸ್ರೇಲಿನ ಹತ್ತು ಸಾವಿರ ಸೈನಿಕರು ಅಂದರೆ ತರಬೇತಿ ಪಡೆದ ಸೈನಿಕರು ಗಿಬೆಯ ನಗರದ ಮೇಲೆ ಧಾಳಿಮಾಡಿದರು. ಘೋರವಾದ ಯುದ್ಧ ನಡೆಯಿತು. ಆದರೆ ಇಂಥ ಭೀಕರ ಪರಿಸ್ಥಿತಿ ಉಂಟಾಗಬಹುದೆಂಬುದು ಬೆನ್ಯಾಮೀನ್ಯರಿಗೆ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವರಲ್ಲಿ ಆರಿಸಿದ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು. ಆದರೆ ಬೆನ್ಯಾಮೀನ್ಯರು, ಕೇಡು ತಮಗೆ ಸಮೀಪವಾಗಿತ್ತೆಂದು ಅರಿಯದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:34
12 ತಿಳಿವುಗಳ ಹೋಲಿಕೆ  

ಆಯಿ ಎಂಬ ಊರಿನ ಅರಸನು ಬೆಳಿಗ್ಗೆ ಇದನ್ನು ತಿಳಿದು ತ್ವರೆಯಾಗಿ ಜನರೆಲ್ಲರ ಸಹಿತವಾಗಿ ಇಸ್ರಾಯೇಲ್ಯರ ವಿರುದ್ಧ ಯುದ್ಧ ಮಾಡುವುದಕ್ಕೆ ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಕಣಿವೆಯ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಪಟ್ಟಣದ ಹಿಂಭಾಗದಲ್ಲಿ ಹೊಂಚಿನೋಡುತ್ತಿರುವುದು ಅವನಿಗೆ ಗೊತ್ತಿರಲಿಲ್ಲ.


ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವುದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನೀನು ತಪ್ಪಿಸಿಕೊಳ್ಳಲಾಗದ ನಾಶನವು ನಿನ್ನ ಮೇಲೆ ಪಕ್ಕನೆ ಬರುವುದು.


ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.


ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು.


ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು, ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.


ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ಯೆಹೋವನು ಇಸ್ರಾಯೇಲರಿಗೆ ಜಯವನ್ನು ಕೊಟ್ಟಿದ್ದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯರ ಯೋಧರನ್ನು ಹತಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು