Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆದರೆ ಪಟ್ಟಣದಿಂದ ಹೊಗೆ ಎದ್ದು ಸ್ತಂಭದೋಪಾದಿಯಲ್ಲಿ ಕಾಣಿಸಿಕೊಳ್ಳಲು ಇಸ್ರಾಯೇಲರು ತಿರುಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆದರೆ ಪಟ್ಟಣದಿಂದ ಹೊಗೆಯೆದ್ದು ಸ್ತಂಭದೋಪಾದಿಯಲ್ಲಿ ಕಾಣಿಸಲು ಇಸ್ರಯೇಲರು ತಿರುಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆದರೆ ಪಟ್ಟಣದಿಂದ ಹೊಗೆಯೆದ್ದು ಸ್ತಂಭದೋಪಾದಿಯಲ್ಲಿ ಕಾಣಿಸಲು ಇಸ್ರಾಯೇಲ್ಯರು ತಿರುಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ಪಟ್ಟಣದೊಳಗಿಂದ ಹೊಗೆಯ ಸ್ತಂಭ ಸಹಿತವಾಗಿ ಏಳುವುದಕ್ಕೆ ಪ್ರಾರಂಭಿಸಿತು. ಬೆನ್ಯಾಮೀನ್ಯರು ಹಿಂದಕ್ಕೆ ತಿರುಗಿ ನೋಡಿದಾಗ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:40
6 ತಿಳಿವುಗಳ ಹೋಲಿಕೆ  

ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶದೆತ್ತರಕ್ಕೆ ಏರಿಹೋಗುವುದನ್ನು ಕಂಡು ಯಾವ ಮಾರ್ಗದಿಂದಲೂ ತಪ್ಪಿಸಿಕೊಳ್ಳಲಾರದೆ ಇದ್ದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.


ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಆರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು.


ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು.


ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?


ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.


ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು