Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಇಸ್ರಾಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಮತ್ತು ಕ್ರೂರ ಕೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ಇಸ್ರಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಹಾಗು ಹುಚ್ಚುಗೆಲಸ ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಇಸ್ರಾಯೇಲ್ಯರಲ್ಲಿ ನಡಿಸಿದ ಇಂಥ ಕೆಟ್ಟ ಹುಚ್ಚುಗೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ನಾನು ನನ್ನ ಉಪಪತ್ನಿಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ಇಸ್ರೇಲರ ಪ್ರತಿಯೊಂದು ಕುಲಕ್ಕೂ ಒಂದು ತುಂಡನ್ನು ಕಳುಹಿಸಿದೆ. ಹೀಗೆ ನಾವು ಪಡೆದುಕೊಂಡ ಪ್ರದೇಶಗಳಿಗೆ ಹನ್ನೆರಡು ತುಂಡುಗಳನ್ನು ಕಳುಹಿಸಿದೆ. ಇಸ್ರೇಲಿನಲ್ಲಿ ಬೆನ್ಯಾಮೀನ್ಯರು ಇಂಥ ಭಯಾನಕ ಕೃತ್ಯವನ್ನು ಮಾಡಿದ್ದಕ್ಕಾಗಿ ನಾನು ಇದನ್ನು ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಇಸ್ರಾಯೇಲಿನಲ್ಲಿ ಇಂಥ ದುಷ್ಕಾರ್ಯವನ್ನೂ ಅತಿರೇಕದ ಕೆಲಸವನ್ನೂ ಮಾಡಿದ್ದರಿಂದ, ನಾನು ನನ್ನ ಉಪಪತ್ನಿಯನ್ನು ಹಿಡಿದು, ಅವಳನ್ನು ಕಡಿದು, ಇಸ್ರಾಯೇಲಿನ ಬಾಧ್ಯತೆಯಾದ ಎಲ್ಲಾ ಸೀಮೆಗಳಿಗೆ ಕಳುಹಿಸಿದೆನು. ನೀವೆಲ್ಲರೂ ಇಸ್ರಾಯೇಲರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:6
9 ತಿಳಿವುಗಳ ಹೋಲಿಕೆ  

ಅವನು ತನ್ನ ಮನೆಗೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು, ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ, ಅವುಗಳನ್ನು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದನು.


ಆಗ ಆ ಮುದುಕನು ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.


ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು’” ಎಂದು ಹೇಳು ಎಂಬುದೇ.


ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.


ಇಸ್ರಾಯೇಲ್ಯರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಾಯೇಲರಲ್ಲಿ ನಡೆಸಿದ ದುಷ್ಟ ಕಾರ್ಯಕ್ಕಾಗಿ ಅವರಿಗೆ ದಂಡನೆಮಾಡೋಣ” ಅಂದುಕೊಂಡರು.


“‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.


ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು