Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವುದಕ್ಕೆ ಹೋದವರು ಇವರನ್ನು ಉಳಿಸಿ, ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರು ಇದ್ದರು. ಪಟ್ಟಣವನ್ನು ನಾಶಪಡಿಸುವುದಕ್ಕೆ ಹೋದವರು ಇವರನ್ನು ಉಳಿಸಿ ಕಾನಾನ್ ನಾಡಿನ ಶಿಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವದಕ್ಕೆ ಹೋದವರು ಇವರನ್ನು ಉಳಿಸಿ ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಹನ್ನೆರಡು ಸಾವಿರ ಸೈನಿಕರು ಯಾಬೇಷ್ ಗಿಲ್ಯಾದಿನಲ್ಲಿ ಗಂಡಸಿನೊಂದಿಗೆ ಎಂದೂ ಲೈಂಗಿಕ ಸಂಪರ್ಕ ಹೊಂದದ ನಾನೂರು ಜನ ಯುವತಿಯರನ್ನು ಗುರುತಿಸಿದರು. ಆ ಯುವತಿಯರನ್ನು ಸೈನಿಕರು ಶೀಲೋವಿನಲ್ಲಿದ್ದ ಪಾಳೆಯಕ್ಕೆ ಕರೆತಂದರು. ಶೀಲೋವ್ ಕಾನಾನ್ ಪ್ರದೇಶದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹಾಗೆಯೇ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡರು. ಅವರು ಯಾವುದೇ ಪುರುಷರೊಂದಿಗೆ ಸಂಬಂಧ ಹೊಂದಿರಲಿಲ್ಲ. ಅವರನ್ನು ಕಾನಾನ್ ದೇಶದಲ್ಲಿರುವ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:12
8 ತಿಳಿವುಗಳ ಹೋಲಿಕೆ  

ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


“ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲರ ಅಧರ್ಮದ ನಿಮಿತ್ತ ಅದಕ್ಕೆ ತಂದ ಗತಿಯನ್ನು ನೋಡಿರಿ.


ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು,


ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು.


ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು.


ಮಿಚ್ಪೆಯಲ್ಲಿ ಯೆಹೋವನ ಮುಂದೆ ಸಭೆ ಸೇರಿದಾಗ, ಅದಕ್ಕೆ ಬಾರದಿದ್ದ ಇಸ್ರಾಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸಿದಾಗ ಯಾಬೇಷ್‍ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.


ಹೇಗೂ ಪುರುಷರನ್ನು, ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವುದು ನಿಮ್ಮ ಕೆಲಸ” ಎಂದು ಆಜ್ಞಾಪಿಸಿ ಕಳುಹಿಸಿದರು.


ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು