ನ್ಯಾಯಸ್ಥಾಪಕರು 21:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರ ತಂದೆಗಳೂ, ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರ ತಂದೆಗಳೂ ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರುತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿ; ಯುದ್ಧ ನಿಮಿತ್ತ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರ ತಂದೆಗಳೂ ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ - ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದದರಿಂದ ನೀವು ನಿರಪರಾಧಿಗಳು ಎಂದು ಹೇಳಿ ಸಮಾಧಾನಪಡಿಸುವೆವು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆ ಯುವತಿಯರ ತಂದೆಗಳಾಗಲಿ ಸಹೋದರರಾಗಲಿ ನಮ್ಮಲ್ಲಿಗೆ ಬಂದು ದೂರು ಹೇಳುತ್ತಾರೆ. ಆಗ ನಾವು ಅವರಿಗೆ, ‘ಬೆನ್ಯಾಮೀನ್ಯರ ಗಂಡಸರಿಗೆ ದಯೆತೋರಿಸಿರಿ; ಅವರು ಆ ಸ್ತ್ರೀಯರನ್ನು ಮದುವೆಯಾಗಲಿ. ಅವರು ನಿಮ್ಮಿಂದ ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ಹೋಗಿರುವರೇ ಹೊರತು ಯುದ್ಧವೇನೂ ಮಾಡಿಲ್ಲ. ಅವರು ಕನ್ಯೆಯರನ್ನು ತೆಗೆದುಕೊಂಡು ಹೋದದ್ದರಿಂದ ನೀವು ದೇವರೆದುರಿಗೆ ಮಾಡಿದ ಪ್ರತಿಜ್ಞೆಯನ್ನು ಮುರಿದಂತಾಗುವುದಿಲ್ಲ. ನಿಮ್ಮ ಕನ್ಯೆಯರನ್ನು ಅವರಿಗೆ ಕೊಡುವುದಿಲ್ಲವೆಂದು ನೀವು ಪ್ರತಿಜ್ಞೆ ಮಾಡಿದ್ದೀರಿ. ನೀವು ಬೆನ್ಯಾಮೀನ್ಯರಿಗೆ ನಿಮ್ಮ ಕನ್ಯೆಯರನ್ನು ಕೊಟ್ಟಿಲ್ಲ. ಆದರೆ ಅವರು ನಿಮ್ಮ ಕನ್ಯೆಯರನ್ನು ತೆಗೆದುಕೊಂಡು ಹೋದರು. ಆದ್ದರಿಂದ ನೀವು ನಿಮ್ಮ ಪ್ರತಿಜ್ಞೆಯನ್ನು ಮುರಿಯಲಿಲ್ಲ’ ಎಂದು ಹೇಳುತ್ತೇವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವರ ತಂದೆಗಳಾದರೂ, ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯವಾಡುವುದಕ್ಕೆ ಬಂದರೆ, ನಾವು ಅವರಿಗೆ, “ಯುದ್ಧದಲ್ಲಿ ನಾವು ಅವನವನಿಗೆ ಹೆಂಡತಿಯನ್ನು ದೊರಕಿಸಿದ ಕಾರಣ, ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಏಕೆಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿ |