Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟಿದ್ದೇವಲ್ಲಾ” ಎಂದು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟೆವಲ್ಲಾ,” ಎಂದು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟೆವಲ್ಲಾ ಎಂದು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಮ್ಮ ಹೆಣ್ಣುಮಕ್ಕಳು ಬೆನ್ಯಾಮೀನ್ಯರನ್ನು ಮದುವೆಯಾಗಲು ಬಿಡುವುದಿಲ್ಲವೆಂದು ನಾವು ಯೆಹೋವನ ಎದುರಿಗೆ ಪ್ರತಿಜ್ಞೆ ಮಾಡಿದ್ದೇವೆ. ಇನ್ನು ಮುಂದೆ ಬೆನ್ಯಾಮೀನ್ಯರಿಗೆ ಹೆಂಡಂದಿರನ್ನು ದೊರಕಿಸುವುದು ಹೇಗೆ?” ಎಂದು ಅವರು ಯೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ನಮ್ಮ ಪುತ್ರಿಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವುದಿಲ್ಲ, ಎಂದು ನಾವು ಯೆಹೋವ ದೇವರ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:7
7 ತಿಳಿವುಗಳ ಹೋಲಿಕೆ  

ಇಸ್ರಾಯೇಲರೆಲ್ಲರೂ ಮಿಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು.


ಜನರು ಅವನಿಗೆ, “ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು.


ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದ ಕಾರಣ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ” ಎಂದು ಮಾತನಾಡಿಕೊಳ್ಳುತ್ತಿದ್ದರು.


ಇಸ್ರಾಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ಕಂಡು ದುಃಖದಿಂದ, “ಅಯ್ಯೋ, ಇಸ್ರಾಯೇಲರಾದ ನಮ್ಮಲ್ಲಿ ಒಂದು ಕುಲವು ಕಡಿಮೆಯಾಯಿತಲ್ಲಾ;


ಮಿಚ್ಪೆಯಲ್ಲಿ ಯೆಹೋವನ ಮುಂದೆ ಸಭೆ ಸೇರಿದಾಗ, ಅದಕ್ಕೆ ಬಾರದಿದ್ದ ಇಸ್ರಾಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸಿದಾಗ ಯಾಬೇಷ್‍ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.


ಅವರ ತಂದೆಗಳೂ, ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು