Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮಿಚ್ಪೆಯಲ್ಲಿ ಯೆಹೋವನ ಮುಂದೆ ಸಭೆ ಸೇರಿದಾಗ, ಅದಕ್ಕೆ ಬಾರದಿದ್ದ ಇಸ್ರಾಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸಿದಾಗ ಯಾಬೇಷ್‍ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮಿಚ್ಫೆಯಲ್ಲಿ ಸರ್ವೇಶ್ವರನ ಮುಂದೆ ಸಭೆ ಸೇರಿದ್ದಾಗ ಅದಕ್ಕೆ ಬಾರದಿದ್ದ ಇಸ್ರಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸುವಲ್ಲಿ, ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ವಿುಚ್ಪೆಯಲ್ಲಿ ಯೆಹೋವನ ಮುಂದೆ ಸಭೆನೆರೆದಾಗ ಅದಕ್ಕೆ ಬಾರದಿದ್ದ ಇಸ್ರಾಯೇಲ್ಯರು ಯಾರಾದರೂ ಇದ್ದಾರೋ ಎಂದು ವಿಚಾರಿಸುವಲ್ಲಿ ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಇಸ್ರೇಲರು, “ಇಲ್ಲಿ ಮಿಚ್ಛೆಗೆ ಇಸ್ರೇಲರಲ್ಲಿ ಬರದಿರುವವರು ಯಾರಾದರೂ ಇರುವರೇ?” ಎಂದು ವಿಚಾರ ಮಾಡಿದರು. ಆಗ ಯಾಬೇಷ್ ಗಿಲ್ಯಾದ್ ನಗರದವರಲ್ಲಿ ಯಾರೂ ಬಂದಿಲ್ಲವೆಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲಿನ ಗೋತ್ರಗಳಲ್ಲಿ ಮಿಚ್ಪೆಗೆ ಯೆಹೋವ ದೇವರ ಬಳಿಗೆ ಬಾರದವರು ಯಾರಾದರೂ ಒಬ್ಬರಿದ್ದಾರೋ?” ಎಂದರು. ಆಗ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:8
9 ತಿಳಿವುಗಳ ಹೋಲಿಕೆ  

ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟಿದ್ದೇವಲ್ಲಾ” ಎಂದು ಗೋಳಾಡಿದರು.


ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬುದು ದೃಢವಾಯಿತು.


ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.


ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನವು ಯಾಬೇಷ್ ಗಿಲ್ಯಾದವರಿಗೆ ಮುಟ್ಟಿತು.


ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’


ಅವರು ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ” ಎಂದು ಹೇಳಿ ಅವರನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು