Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದರಲ್ಲೂ ಪಾಲ್ಗೊಳ್ಳದೆ ಇದ್ದ ಇಸ್ರಯೇಲರನ್ನು ಪರೀಕ್ಷಿಸುವುದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ನೋಡದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1-2 ಇಸ್ರೇಲರ ಪ್ರದೇಶವನ್ನು ಬಿಟ್ಟುಹೋಗುವಂತೆ ಯೆಹೋವನು ಉಳಿದೆಲ್ಲ ಜನಾಂಗದವರನ್ನು ಒತ್ತಾಯಪಡಿಸಲಿಲ್ಲ. ಯೆಹೋವನು ಇಸ್ರೇಲರನ್ನು ಪರೀಕ್ಷಿಸಬೇಕೆಂದಿದ್ದನು. ಈಗ ಬದುಕಿದ್ದ ಇಸ್ರೇಲರಲ್ಲಿ ಯಾರೂ ಕಾನಾನ್ಯರ ಭೂಮಿಯನ್ನು ತೆಗೆದುಕೊಳ್ಳುವುದಕ್ಕಾಗಿ ಯುದ್ಧ ಮಾಡಿರಲಿಲ್ಲ. ಅದಕ್ಕಾಗಿ ಯೆಹೋವನು ಆ ಬೇರೆ ಜನಾಂಗದವರನ್ನು ಅವರ ದೇಶದಲ್ಲಿ ವಾಸಿಸಲು ಬಿಟ್ಟನು. (ಆ ಯುದ್ಧಗಳಲ್ಲಿ ಭಾಗವಹಿಸದ ಈ ಇಸ್ರೇಲರಿಗೆ ಯುದ್ಧ ಮಾಡುವುದನ್ನು ಕಲಿತುಕೊಳ್ಳಲು ಒಂದು ಅವಕಾಶ ದೊರೆಯುವಂತೆ ಯೆಹೋವನು ಹೀಗೆ ಮಾಡಿದ್ದನು.) ಯೆಹೋವನು ಆ ಭೂಮಿಯಲ್ಲಿ ವಾಸಿಸಲು ಬಿಟ್ಟ ಜನಾಂಗಗಳ ಹೆಸರುಗಳು ಇಂತಿವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕಾನಾನ್ ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲರನ್ನು ಪರೀಕ್ಷಿಸುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:1
20 ತಿಳಿವುಗಳ ಹೋಲಿಕೆ  

ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.


ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ.


ಯೆಹೋವನು ನನಗೆ, “ನಾನು ನಿನ್ನನ್ನು ನನ್ನ ಜನವೆಂಬ ಅದಿರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.


ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.


ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.


ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ,


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು


ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು.


ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು


ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಓಡಿಸಲಿಲ್ಲ.


ಇಸ್ರಾಯೇಲ್‍ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,


ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು