Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನು ಇಸ್ರಾಯೇಲ್ಯರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದರಿಂದ ಅವನು ಅವನನ್ನು ಪೂರ್ಣವಾಗಿ ಸೋಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒತ್ನೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ನೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮ್‌ನನ್ನು ಸೋಲಿಸಲು ಯೆಹೋವನು ಒತ್ನೀಯೇಲನಿಗೆ ಸಹಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:10
24 ತಿಳಿವುಗಳ ಹೋಲಿಕೆ  

ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.


ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು.


ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಇದಲ್ಲದೆ ಅವನು ಚೊರ್ಗಕ್ಕೂ, ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು.


ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.


ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.


ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.


ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ,


ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.


ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.


ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ.


ಅದಕ್ಕೆ ಯೆಹೋವನು ಮೋಶೆಗೆ, “ನೂನನ ಮಗನಾದ ಯೆಹೋಶುವನಲ್ಲಿ ನನ್ನ ಆತ್ಮವು ವಾಸಿಸುತ್ತಿದೆ,


ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.


ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.


ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”


ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.


ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.


ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.


ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.


ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.


ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು