Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲ್ಯರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರು ಯೆಹೋವನಿಗೆ ಮೊರೆಯಿಟ್ಟರು. ಇಸ್ರೇಲರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಏಹೂದ. ಅವನು ಎಡಚನಾಗಿದ್ದನು. ಅವನು ಬೆನ್ಯಾಮೀನ್ ಕುಲದ ಗೇರ ಎಂಬವನ ಮಗನಾಗಿದ್ದನು. ಇಸ್ರೇಲರು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪಕಾಣಿಕೆಯನ್ನು ಕೊಡಲು ಏಹೂದನನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಇಸ್ರಾಯೇಲರು ಯೆಹೋವ ದೇವರನ್ನು ಕೂಗಿದಾಗ, ಯೆಹೋವ ದೇವರು ಅವರಿಗೆ ಬೆನ್ಯಾಮೀನನಾದ ಗೇರನ ಮಗ ಏಹೂದನನ್ನು ರಕ್ಷಿಸುವುದಕ್ಕೆ ಎಬ್ಬಿಸಿದರು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲರು ಮೋವಾಬಿನ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:15
22 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.


ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,


ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, “ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು.


ಬಿಲ್ಲುಗಾರರೂ, ಎಡಗೈ ಬಲಗೈಗಳಿಂದ ಕಲ್ಲುಗಳನ್ನೂ ಮತ್ತು ಬಾಣಗಳನ್ನೂ ಎಸೆಯಬಲ್ಲವರೂ ಆಗಿದ್ದು ಯುದ್ಧದಲ್ಲಿ ಸಹಾಯಮಾಡುವುದಕ್ಕಾಗಿ ಅವನ ಬಳಿಗೆ ಬಂದ ಯುದ್ಧವೀರರ ಪಟ್ಟಿ.


ಈ ಎಲ್ಲಾ ಜನರಲ್ಲಿ ಏಳುನೂರು ಜನರು ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬರು ಕೂದಲೆಳೆಯಷ್ಟು ಗುರಿತಪ್ಪದ ಹಾಗೆ ಕವಣೆಯನ್ನು ಹೊಡೆಯುವುದರಲ್ಲಿ ನಿಪುಣರಾಗಿದ್ದರು.


‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.


ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.


ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.


ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ, ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ಇಸ್ರಾಯೇಲರು ಅವನಿಗೆ ಹದಿನೆಂಟು ವರ್ಷ ದಾಸರಾಗಿದ್ದರು.


ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ


ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಅವನು ಅಮಾಸನನ್ನು, “ಸಹೋದರನೇ ಕ್ಷೇಮವೋ” ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು,


ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,


ಬೆಳನ ಮಕ್ಕಳು: ಅದ್ದಾರ್, ಗೇರ, ಅಬೀಹೂದ್,


ಗೇರ, ಶೆಪೂಫಾನ್ ಮತ್ತು ಹೂರಾಮ್ ಎಂಬವರು.


ಅವರೆಲ್ಲರೂ ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಸಲಕರಣಿಗಳು, ಶಸ್ತಾಸ್ತ್ರಗಳು, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು