ನ್ಯಾಯಸ್ಥಾಪಕರು 3:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವಿದೆ” ಅಂದನು. ಆಗ ಅರಸನು, “ನಿಶ್ಯಬ್ದ” ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ತಾನಾದರೋ ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದವರೆಗೆ ಹೋಗಿ, ಹಿಂದಿರುಗಿ ಎಗ್ಲೋನನ ಬಳಿಗೆ ಬಂದನು; “ಅರಸರೇ, ತಮಗೆ ತಿಳಿಸಬೇಕಾದ ಒಂದು ರಹಸ್ಯ ವಿಷಯವಿದೆ,” ಎಂದನು. ಆಗ ಅರಸ, “ನಿಶ್ಯಬ್ದ” ಎಂದನು. ಅವನ ಸೇವಕರೆಲ್ಲರು ಅಲ್ಲಿಂದ ಹೊರಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು - ಅರಸೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವದೆ ಅಂದನು. ಆಗ ಅರಸನು ನಿಶ್ಶಬ್ದ ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಏಹೂದನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂತಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸಬೇಕಾದ ಒಂದು ರಹಸ್ಯ ಸಂದೇಶವಿದೆ” ಎಂದು ಹೇಳಿದನು. ಅರಸನು, “ಸುಮ್ಮನಿರು” ಎಂದು ಹೇಳಿ ತನ್ನ ಸೇವಕರೆಲ್ಲರನ್ನು ಕೋಣೆಯಿಂದ ಆಚೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಕ್ಕೆ ತಿರುಗಿ, ಅವನ ಬಳಿಗೆ ಬಂದು, “ಅರಸನೇ, ನಿನ್ನ ಸಂಗಡ ಹೇಳಬೇಕಾದ ರಹಸ್ಯವಾದ ಒಂದು ಮಾತು ಇದೆ,” ಎಂದನು. ಅವನು, “ನಿಶ್ಶಬ್ದ,” ಎಂದು ಹೇಳಿದಾಗ, ಅವನ ಬಳಿಯಲ್ಲಿ ನಿಂತಿದ್ದವರೆಲ್ಲರು ಅವನನ್ನು ಬಿಟ್ಟು ಹೊರಗೆ ಹೋದರು. ಅಧ್ಯಾಯವನ್ನು ನೋಡಿ |