Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಏಹೂದನು ಅವರಿಗೆ ನಾಯಕನಾಗಿ, “ನನ್ನನ್ನು ಹಿಂಬಾಲಿಸಿ ಬನ್ನಿ; ಸರ್ವೇಶ್ವರ ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೊಪ್ಪಿಸಿದ್ದಾರೆ,” ಎಂದನು. ಅಂತೆಯೇ ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲ ಹಿಡಿದುಕೊಂಡು ಯಾರನ್ನೂ ದಾಟಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಅವರ ನಾಯಕನಾಗಿ - ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆಂದು ಹೇಳಲು ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಏಹೂದನು ಇಸ್ರೇಲರಿಗೆ, “ನನ್ನನ್ನು ಹಿಂಬಾಲಿಸಿರಿ, ನಮ್ಮ ಶತ್ರುಗಳಾದ ಮೋವಾಬ್ಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ” ಎಂದನು. ಇಸ್ರೇಲರು ಏಹೂದನನ್ನು ಹಿಂಬಾಲಿಸಿದರು. ಅವರು ಜೋರ್ಡನ್ ನದಿಯ ಹಾಯಗಡಗಳನ್ನೆಲ್ಲಾ ವಶಪಡಿಸಿಕೊಂಡರು. ಆ ಸ್ಥಳಗಳು ಮೋವಾಬಿಗೆ ಹೋಗುವ ದಾರಿಯಲ್ಲಿದ್ದವು. ಜೋರ್ಡನ್ ನದಿಯನ್ನು ದಾಟಿಹೋಗಲು ಇಸ್ರೇಲರು ಯಾರಿಗೂ ಅವಕಾಶ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರಿಗೆ, “ನೀವು ನನ್ನ ಹಿಂದೆ ಬನ್ನಿರಿ. ಏಕೆಂದರೆ ಯೆಹೋವ ದೇವರು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು. ಅವರು ಅವನ ಹಿಂದೆ ಬಂದು, ಮೋವಾಬ್ಯರಿಗೆ ಎದುರಾದ ಯೊರ್ದನ್ ನದಿ ರೇವುಗಳನ್ನು ಹಿಡಿದು, ಒಬ್ಬರನ್ನಾದರೂ ದಾಟಗೊಡದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:28
12 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಎಫ್ರಾಯೀಮಿಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿಸಿರಿ ಎಂದು ಅವರನ್ನು ಕೇಳಿದರೆ ಅವರು, “ನೀನು ಎಫ್ರಾಯೀಮ್ಯನೋ” ಎಂದು ಕೇಳುವರು.


ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.


ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ.


ಅರಸನ ಆಳುಗಳು ಯೊರ್ದನಿನ ದಾರಿ ಹಿಡಿದು ಹೋಗಿ ಹೊಳೆದಾಟುವ ಸ್ಥಳದವರೆಗೂ ಹುಡುಕಿದರು. ಅವರನ್ನು ಹಿಂದಟ್ಟುವವರು ಹೋದ ಕೂಡಲೇ ಹೆಬ್ಬಾಗಿಲನ್ನು ಮುಚ್ಚಿದರು.


ಯೆಹೋವನು ಈಟಿಕತ್ತಿಗಳಿಲ್ಲದೇ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರಿಗೆಲ್ಲಾ ತಿಳಿದುಬರುವುದು. ಯಾಕೆಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ. ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು” ಅಂದನು.


ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್‌ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್‌ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು.


“ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿರಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವೂ ಮಾಡಬೇಕು.


ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಯಿಸಿದನು. ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು, ದೆಬೋರಳೂ ಅವರೊಂದಿಗೆ ಹೋದಳು.


ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರಮಿಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಹತ್ಯೆಮಾಡಿದರು.


ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು.


ಆತನು ಅವರಿಗೆ, “ಐಗುಪ್ತ, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ ಇವೇ


ಇಸ್ರಾಯೇಲರ ಅರಸನು ಹೊರಟು ಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು