Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಸ್ರಯೇಲರು ಮೊರೆಯಿಟ್ಟಾಗ ಅವರನ್ನು ಬಿಡುಗಡೆ ಮಾಡಲು ಸರ್ವೇಶ್ವರ ಒಬ್ಬ ವ್ಯಕ್ತಿಯನ್ನು ಎಬ್ಬಿಸಿದರು; ಆತನೇ ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಸ್ರಾಯೇಲ್ಯರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು; ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಒತ್ನೀಯೇಲ. ಅವನು ಕೆನಜ ಎಂಬವನ ಮಗನು. ಕೆನಜನು ಕಾಲೇಬನ ತಮ್ಮ. ಒತ್ನೀಯೇಲನು ಇಸ್ರೇಲರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತರುವಾಯ ಇಸ್ರಾಯೇಲರು ಯೆಹೋವ ದೇವರನ್ನು ಕೂಗುವಾಗ, ಯೆಹೋವ ದೇವರು ಇಸ್ರಾಯೇಲರಿಗೆ ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ, ಕಾಲೇಬನ ತಮ್ಮನಾದ ಕೆನಾಜನ ಮಗ ಒತ್ನಿಯೇಲನನ್ನು ಎಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:9
15 ತಿಳಿವುಗಳ ಹೋಲಿಕೆ  

ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.


ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.


ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯಿಟ್ಟರು.


ಇಸ್ರಾಯೇಲರು ಮಿದ್ಯಾನ್ಯರ ಹಿಂಸೆಯನ್ನು ಸಹಿಸಲಾರದೆ ಯೆಹೋವನಿಗೆ ಮೊರೆಯಿಟ್ಟಾಗ


ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು.


ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,


ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ.


ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.


ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಟ್ಟನು.


ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.


ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು