ನ್ಯಾಯಸ್ಥಾಪಕರು 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ದೆಬೋರಳು ಬಾರಾಕನಿಗೆ, “ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು” ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ದೆಬೋರಳು ಬಾರಾಕನಿಗೆ, “ಏಳು, ಸರ್ವೇಶ್ವರ ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನ ಇದೇ; ನಿಶ್ಚಯವಾಗಿ ಅವರು ತಾವೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವರು,” ಎಂದಳು. ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತ ತಾಬೋರ್ ಬೆಟ್ಟದಿಂದಿಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ದೆಬೋರಳು ಬಾರಾಕನಿಗೆ - ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇದೇ; ನಿಶ್ಚಯವಾಗಿ ಆತನು ತಾನೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವನು ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದಿಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ದೆಬೋರಳು ಬಾರಾಕನಿಗೆ, “ಈ ದಿನ ಯೆಹೋವನು ಸೀಸೆರನನ್ನು ಸೋಲಿಸಲು ನಿನಗೆ ಸಹಾಯ ಮಾಡುತ್ತಾನೆ. ಯೆಹೋವನು ನಿನಗಾಗಿ ದಾರಿಯನ್ನು ಸುಗಮಗೊಳಿಸಿದ್ದಾನೆಂಬುದು ನಿನಗೆ ಖಚಿತವಾಗಿ ಗೊತ್ತಿದೆ” ಎಂದು ಹೇಳಿದಳು. ಆದ್ದರಿಂದ ಬಾರಾಕನು ಹತ್ತು ಸಾವಿರ ಜನರೊಂದಿಗೆ ತಾಬೋರ್ ಬೆಟ್ಟದಿಂದ ಇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ದೆಬೋರಳು ಬಾರಾಕನಿಗೆ, “ನೀನು ಏಳು. ಏಕೆಂದರೆ ಯೆಹೋವ ದೇವರು ಸೀಸೆರನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವ ದಿನವು ಇದೇ. ಯೆಹೋವ ದೇವರು ನಿನ್ನ ಮುಂದೆ ಹೊರಡಲಿಲ್ಲವೋ?” ಎಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು, ತಾಬೋರ್ ಬೆಟ್ಟದಿಂದ ಇಳಿದನು. ಅಧ್ಯಾಯವನ್ನು ನೋಡಿ |